ಮಣಿಪಾಲ: ಪಠ್ಯ ಪರಿಷ್ಕರಣೆಯ ವಾಸ್ತವಾಂಶದ ಆಧಾರದಲ್ಲಿ ಗುರುವಾರವೇ (ಜೂ.2) ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಖಾಸಗಿ ಹೊಟೇಲ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಠ್ಯ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಲ್ಲಿ ಸಮಗ್ರ ವರದಿ ಕೇಳಿದ್ದೇನೆ.
ಸಚಿವರು ಗುರುವಾರ ವರದಿ ನೀಡಲಿದ್ದಾರೆ. ಹಾಗೆಯೇ ವಿವಿಧ ಮಠದ ಸ್ವಾಮೀಜಿಗಳು, ಬೇರೆಯವರು ಕೂಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಪತ್ರವನ್ನು ಬರೆದಿದ್ದಾರೆ ಮತ್ತು ಪರಿಷ್ಕರಣೆಯಲ್ಲಿ ಆತಂಕ ಪಡುವ ವಿಷಯ ಏನೂ ಇಲ್ಲ ಎಂಬ ವಾದವೂ ಇದೆ. ಹೀಗಾಗಿ ಈ ಎಲ್ಲ ಅಂಶಗಳನ್ನು ಪರಿಶೀಲಿಸಿ, ಶಿಕ್ಷಣ ಸಚಿವರ ವರದಿಯನ್ನು ಆಧರಿಸಿ, ವಾಸ್ತವಾಂಶ ಏನಿದೆ ಎಂಬುದನ್ನು ತಿಳಿದು ಜೂನ್ 2 ರಂದು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ಯಾರ್ಯಾರು ತಮ್ಮ ಪಠ್ಯ, ಪದ್ಯಗಳನ್ನು ವಾಪಸ್ ಪಡೆಯಲು ಪತ್ರ ಬರೆದಿದ್ದಾರೋ ಅವರೊಂದಿಗೂ ಮಾತುಕತೆ ನಡೆಸಲಿದ್ದೇನೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…