Featured

ಮಣಿಪಾಲ: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಗೆ ಆನ್‌ಲೈನ್‌ನಲ್ಲಿ 2.19 ಲಕ್ಷ ರೂ. ವಂಚನೆ – vishwanews24

ಮಣಿಪಾಲ: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ಆನ್‌ಲೈನ್‌ನಲ್ಲಿ 2.19 ಲಕ್ಷ ರೂ. ವಂಚನೆ

ಮಣಿಪಾಲ: ಪೊಲೀಸ್‌ ಅಧಿಕಾರಿಗಳೆಂದು ನಂಬಿಸಿ ವ್ಯಕ್ತಿಯೊಬ್ಬರನ್ನು ವಂಚಿಸಿದ ಘಟನೆ ನಡೆದಿದೆ. 80 ಬಡಗಬೆಟ್ಟು ನಿವಾಸಿ ರವೀಂದ್ರ ವಂಚನೆಗೆ ಒಳಗಾದವರು. ನ. 6ರಂದು ಮಣಿಪಾಲದಲ್ಲಿರುವಾಗ ಅವರಿಗೆ ಅನಾಮಧೇಯ ವೀಡಿಯೋ ಕರೆ ಬಂದಿತ್ತು.

ನಾವು ಪೊಲೀಸ್‌ ಅಧಿಕಾರಿಗಳು ಎಂದು ಹೇಳಿದ್ದು, ನಿಮ್ಮ ಆಧಾರ್‌ ನಂಬರ್‌ ಅನ್ನು ಡ್ರಗ್ಸ್‌ ಕೇಸಿನಲ್ಲಿ ಉಪಯೋಗಿಸಲಾಗಿದೆ. ಉತ್ತರ ಪ್ರದೇಶ ರಾಜ್ಯದ ಅಲಂಬಾಗ್‌ ಪೊಲೀಸ್‌ ಠಾಣೆಯಲ್ಲಿ ನಿಮ್ಮ ವಿರುದ್ದ ಕ್ರಿಮಿನಲ್‌ ಪ್ರಕರಣ ದಾಖಲಾಗಿರುತ್ತದೆ ಎಂದು ತಿಳಿಸಿದ್ದರು.

ವೀಡಿಯೋ ಕಾಲ್‌ನಲ್ಲಿ ಇಬ್ಬರು ಪೊಲೀಸ್‌ ಅಧಿಕಾರಿಗಳಿದ್ದರು. ಅವರು ಹಿಂದಿ ಭಾಷೆಯಲ್ಲಿ ಮಾತನಾಡುತ್ತಾ, ನಿಮ್ಮ ಆಧಾರ್‌ ಕಾರ್ಡ್‌ ಸಂಖ್ಯೆಯಲ್ಲಿ ಬೇರೆ ಬೇರೆ ಕೇಸುಗಳಿವೆ. ದೇಶದ್ರೋಹ ಕೇಸಿನಲ್ಲಿ ಕೂಡ ನಿಮ್ಮ ಆಧಾರ್‌ ಸಂಖ್ಯೆ ಇದೆ. ಅದಕ್ಕೆ ನಿಮ್ಮ ಬ್ಯಾಂಕ್‌ ಖಾತೆಯ ವಿವರ, ಅಕೌಂಟ್‌ ಪರಿಶೀಲನೆ ನಡೆಯಬೇಕು ಎಂದು ಹೇಳಿ ಬೇರೆ ಅಕೌಂಟ್‌ ಸಂಖ್ಯೆ ಕಳುಹಿಸಿ ಆ ಖಾತೆಗೆ 2.19 ಲಕ್ಷ ರೂ. ವರ್ಗಾಯಿಸಬೇಕು.

ಶುಲ್ಕ ವಸೂಲು ಮಾಡಿ ಉಳಿದ ಹಣ ವಾಪಸು ನೀಡಲಾಗುವುದು ಎಂದು ತಿಳಿಸಿದ್ದರು. ಅದರಂತೆ ರವೀಂದ್ರ ಅವರು 2.19 ಲಕ್ಷ ರೂ. ವರ್ಗಾಯಿಸಿದ್ದರು. ಆದರೆ ಆರೋಪಿಗಳು ಅದನ್ನು ಹಿಂದಿರುಗಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

19 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

19 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

19 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

19 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

20 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

20 hours ago