Featured

ಮಣಿಪಾಲ: ಫೈವ್ ಸ್ಟಾರ್ ಹೊಟೇಲ್‌ಗಳಲ್ಲಿ ರೂಮ್ ಪಡೆದು ವಂಚನೆ ; ಆರೋಪಿಯ ಬಂಧನ – vishwanews24

ಮಣಿಪಾಲ: ಫೈವ್ ಸ್ಟಾರ್ ಹೊಟೇಲ್‌ಗಳಲ್ಲಿ ರೂಮ್ ಪಡೆದು ವಂಚನೆ ; ಆರೋಪಿಯ ಬಂಧನ

ಆರೋಪಿಗೆ 14ದಿನಗಳ ಕಾಲ ನ್ಯಾಯಾಂಗ ಬಂಧನ..

ಮಣಿಪಾಲ: ದೇಶದ ವಿವಿಧ ರಾಜ್ಯಗಳಲ್ಲಿನ ಪ್ರತಿಷ್ಠಿತ ಫೈವ್ ಸ್ಟಾರ್ ಹೊಟೇಲ್‌ಗಳನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ ತಮಿಳುನಾಡು ಮೂಲಕ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡು ರಾಜ್ಯದ ತೂತುಕುಡಿಯ ಬಿಮ್ಸೆಂಟ್ ಜಾನ್(67) ಬಂಧಿತ ಆರೋಪಿ. ಈತ ಡಿ.7ರಂದು ಮಣಿಪಾಲ ಕಂಟ್ರಿ ಇನ್ ಹೊಟೇಲ್‌ನಲ್ಲಿ ತನಗೆ ಕಾನ್ಫರೆನ್ಸ್ ಮೀಟಿಂಗ್ ಇದೆ ಎಂಬುದಾಗಿ ಹೇಳಿ ರೂಮ್ ಪಡೆದುಕೊಂಡಿದ್ದನು.

ಮುಂಗಡ ಹಣವನ್ನು ಡಿ.9ರಂದು ಕೊಡುವುದಾಗಿ ಹೇಳಿ ಡಿ.12ರಂದು ರೂಮ್ ಚೆಕ್‌ಔಟ್ ಮಾಡುತ್ತೇನೆ ಎಂದು ಹೊಟೇಲ್ ಮ್ಯಾನೇಜರ್‌ನ್ನು ನಂಬಿಸಿ ರೂಮ್‌ನಲ್ಲಿ ಉಳಿದುಕೊಂಡಿದ್ದನು. ಬಳಿಕ ಹೊಟೆಲ್‌ನಲ್ಲಿಯೇ ಊಟ ತಿಂಡಿ ಮಾಡಿ ಒಟ್ಟು 39,298ರೂ. ಬಿಲ್ ಮಾಡಿ ಹಣ ಕೊಡದೇ ಪರಾರಿಯಾಗಿ ನಂಬಿಸಿ ಮೋಸ ಮಾಡಿರುವುದಾಗಿ ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಆರೋಪಿ ಜೋನ್‌ ನನ್ನು ಮಣಿಪಾಲದಲ್ಲಿ ಡಿ.9ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಇದೇ ರೀತಿ ದೇಶದ ದೆಹಲಿ, ಮಹಾರಾಷ್ಟ್ರ ಥಾಣೆ, ಕೇರಳದ ಕೊಲ್ಲಂ ಸೇರಿದಂತೆ ಹಲವು ರಾಜ್ಯಗಳಲ್ಲಿನ ಪ್ರತಿಷ್ಠಿತ ಫೈವ್ ಸ್ಟಾರ್ ಹೊಟೇಲ್‌ಗಳಲ್ಲಿ ರೂಮ್ ಪಡೆದು ಕೊಂಡು ಸಾವಿರಾರು ರೂ. ಬಿಲ್ ಮಾಡಿ, ಬಳಿಕ ಹಣ ಪಾವತಿಸದೆ ಪರಾರಿಯಾಗಿ ವಂಚಿಸುತ್ತಿದ್ದನು ಎಂದು ತಿಳಿದುಬಂದಿದೆ.

ಪದವೀಧರನಾಗಿರುವ ಈತನ ವಿರುದ್ಧ ದೇಶದ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 49 ಪ್ರಕರಣಗಳು ದಾಖಲಾಗಿವೆ. ಈತ ಅವಿವಾಹಿತನಾಗಿದ್ದು ಈತ ಈ ರೀತಿಯ ವಂಚನೆ ಪ್ರಕರಣದಲ್ಲಿ ಮೊದಲ ಬಾರಿಗೆ ದೆಹಲಿಯಲ್ಲಿ ಬಂಧಿತನಾಗಿದ್ದನು. ಈ ಪ್ರಕರಣದಲ್ಲಿ ಈತ 1996ರಲ್ಲಿ ಐದು ವರ್ಷ ಜೈಲುಶಿಕ್ಷೆಯನ್ನು ಅನುಭವಿಸಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪಾಲ ಪೊಲೀಸರು ಆರೋಪಿಯನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 14ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

5 minutes ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

16 minutes ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

20 minutes ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

4 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

4 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago