ಉಡುಪಿ : ಮಣಿಪಾಲದ ವಸತಿ ಸಮುಚ್ಛಯವೊಂದರಲ್ಲಿ ವೇಶ್ಯಾ ವಾಟಿಕೆಗೆ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ನ.26 (ರವಿವಾರ) ರಂದು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯ ಉನ್ನತ ರೆಸಿಡೆನ್ಸಿಯ ಎರಡು ಫ್ಲ್ಯಾಟ್‌ಗಳಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿಯಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕ ಜಯಾನಂದ ಕೆ. ದಾಳಿ ನಡೆಸಿ, ದಂಧೆ ನಡೆಸುತ್ತಿದ್ದ ಗಣೇಶ್, ಸುಧೀರ್ ಮತ್ತು ಮಾರುತಿ ಎಂಬವರನ್ನು ಬಂಧಿಸಿ, ಕೃತ್ಯಕ್ಕೆ ಸಂಬಂಧಿಸಿದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಅದೇ ರೀತಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.
ಪ್ರಕರಣದ ಆರೋಪಿಗಳು ವೇಶ್ಯಾವಾಟಿಕೆ ದಂಧೆ ನಡೆಸಿ ಅಕ್ರಮ ಲಾಭ ಪಡೆಯುತ್ತಿರುವುದಾಗಿ ದೂರಲಾಗಿದೆ. ಈ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ನಾಳೆ ಶಿಕ್ಷೆ ಪ್ರಕಟ ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ…
ಕಾಂಗ್ರೆಸ್‌ನಲ್ಲಿ ಸಂಪುಟ ಸಚಿವ ಸ್ಥಾನಕ್ಕಾಗಿ ಕಸರತ್ತು: 12 ಶಾಸಕರಿಂದ ದೆಹಲಿಯಲ್ಲಿ ಸುರ್ಜೇವಾಲ ಭೇಟಿ ನವದೆಹಲಿ: ಸಚಿವ ಸಂಪುಟ ಪುನಾರಚನೆ ಮಾಡುವಂತೆ…
ಐಎಎಸ್ ಅಧಿಕಾರಿ ಎಂದು ನಂಬಿಸಿ ಕೋಟ್ಯಾಂತರ ರೂ. ವಂಚನೆ : ಆರೋಪಿ ಬಂಧನ ಬೆಂಗಳೂರು :ತಾನು 2023ನೇ ಬ್ಯಾಚ್‌ನ ಐಎಎಸ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಮಂಡನೆ ನವದೆಹಲಿ : ಲೋಕಸಭೆಯಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಹಾಗೂ…
ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…
ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…