Featured

ಮಣಿಪಾಲ :ಮಣ್ಣಪಳ್ಳವನ್ನು ಪ್ರವಾಸೀ ತಾಣವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಕ್ರಾಪ್ಟ್ ವಿಲೇಜ್ ಮಾಡಲು ರೂಪುರೇಷೆ ಸಿದ್ದಪಡಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. – Vishwanews24

ಮಣಿಪಾಲ :ಮಣ್ಣಪಳ್ಳವನ್ನು ಪ್ರವಾಸೀ ತಾಣವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಕ್ರಾಪ್ಟ್ ವಿಲೇಜ್ ಮಾಡಲು ರೂಪುರೇಷೆ ಸಿದ್ದಪಡಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಮಣಿಪಾಲ :ಮಣ್ಣಪಳ್ಳವನ್ನು ಪ್ರವಾಸೀ ತಾಣವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಕ್ರಾಪ್ಟ್ ವಿಲೇಜ್ ಮಾಡಲು ರೂಪುರೇಷೆ ಸಿದ್ದಪಡಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

ಉಡುಪಿ: ಮಣಿಪಾಲದ ಮಣ್ಣಪಳ್ಳವನ್ನು ಪ್ರವಾಸೀ ತಾಣವಾಗಿ ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಅಲ್ಲಿ ಕ್ರಾಪ್ಟ್  ವಿಲೇಜ್ ಮಾಡುವ ಬಗ್ಗೆ ಚಿಂತನೆ ಮತ್ತು ಅಗತ್ಯ ರೂಪುರೇಷೆಗಳನ್ನು ಸಿದ್ದಪಡಿಸುವಂತೆ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು.

ಅವರು ಶುಕ್ರವಾರ ಜಿಲ್ಲಾದಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಪ್ರವಾಸೋದ್ಯಮ ಅಭಿವೃಧ್ದಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಣ್ಣಪಳ್ಳದಲ್ಲಿ ವಾರದ ಮಾರುಕಟ್ಟೆ, ಆಹಾರ ಮೇಳ ಮತ್ತು ಕರಕುಶಲ ವಸ್ತುಪ್ರದರ್ಶನ ಮುಂತಾದ ಕಾರ್ಯಕ್ರಮಗಳ ಮೂಲಕ ದೆಹಲಿ ಹಾತ್ ಮಾದರಿಯಲ್ಲಿ ಕ್ರಾಪ್ಟ್ ವಿಲೇಜ್ ಮಾಡಲು ಸಾಧ್ಯವಿದ್ದು , ಆ ಮೂಲಕ ಪ್ರವಾಸೋದ್ಯಮ ಚಟುವಟಿಕೆಗಳನ್ನು ಕೈಗೊಂಡು ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಬಹುದಾಗಿದೆ ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ , ಅಗತ್ಯ ರೂಪುರೇಷೆಗಳನ್ನು ಸಿದ್ದಪಡಿಸಿ ಸಲ್ಲಿಸುವಂತೆ ತಿಳಿಸಿದರು.

ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ಎಕೋ ಟೂರಿಸಂ ಬಗ್ಗೆ ತರಬೇತಿ ಕಾರ್ಯಾಗಾರಗಳನ್ನು ಏರ್ಪಡಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಅರಣ್ಯಗಳಲ್ಲಿ ಟ್ರಕ್ಕಿಂಗ್ ಮೂಲಕ ಪ್ರವಾಸೋದ್ಯಮವನ್ನು ಅಭಿವೃಧ್ದಿಪಡಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಮತ್ತು ಪ್ರವಾಸೋದ್ಯಮಗಳು ಇಲಾಖೆಗಳು ಜಂಟಿಯಾಗಿ ಪರಿಶೀಲಿಸಿ, ಪ್ರವಾಸಿಗರಿಗೆ ಅನುಕೂಲವಾಗುವ ಟ್ರಕ್ಕಿಂಗ್ ದಾರಿಗಳನ್ನು ಆಯ್ಕೆ ಮಾಡುವಂತೆ ತಿಳಿಸಿದರು.

ಪಡುಬಿದ್ರೆ ಕಡಲ ತೀರದಲ್ಲಿ ಸೈಕಲ್ ಸಕ್ರ್ಯೂಟ್ ಮತ್ತು ಕುಂದಾಪುರದ ಕೋಡಿ ಬೀಚ್ ನಿಂದ ಕೋಡಿತಲೆ ಡೆಲ್ಟಾ ಪಾಯಿಂಟ್ ವರೆಗೆ ಸೈಕಲ್ ಟ್ರಾಕ್ ನಿರ್ಮಿಸುವ ಬಗ್ಗೆ ಮತ್ತು ಕುಂದಾಪುರ ಕೋಡಿ ಸೀ ವಾಕ್ ಬಳಿ ಮೂಲ ಸೌಕರ್ಯ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುವ ಬಗ್ಗೆ ಹಾಗೂ ಕುಂದಾಪುರ ಸೀ ವಾಕ್ ನಿಂದ ಗಂಗೋಳ್ಳಿ ಸೀ ವಾಕ್ ಗೆ ಸಂಪರ್ಕ ಕಲ್ಪಿಸುವ ಕುರಿತು ಚರ್ಚೆ ನಡೆಯಿತು.

ಪ್ರಸ್ತುತ ಜಿಲ್ಲೆಯಲ್ಲಿ ಹೋಂ ಸ್ಟೇ ಪರವಾನಿಗೆಗೆ ನಿರಪೇಕ್ಷಣಾ ಪತ್ರವನ್ನು ಪೊಲೀಸ್ ಅಧೀಕ್ಷಕರಿಂದ ಪಡೆಯುತ್ತಿದ್ದು, ಈ ಪ್ರಕ್ರಿಯೆಯಲ್ಲಿ ವಿಳಂಬಾಗುತ್ತಿರುವುದರಿಂದ ಇನ್ನು ಮುಂದೆ ಸಂಬಂದಪಟ್ಟ ವ್ಯಾಪ್ತಿಯ ಪೊಲೀಸ್ ವೃತ್ತ ನಿರೀಕ್ಷಕರಿಂದ ಪಡೆಯುವ ಬಗ್ಗೆ ಚರ್ಚೆ ನಡೆಯಿತು.

ತನ್ನ ಮಗನಿಗೆ ಓದುವುದರಲ್ಲಿ ಕಾಂಪಿಟೇಷನ್ ನೀಡುತ್ತಿದ್ದಾನೆ ಎಂಬ ಕಾರಣಕ್ಕೆ ಸಹಪಾಠಿಗೆ ವಿಷ ನೀಡಿ ಕೊಲೆಗೈದ ಮಹಿಳೆ – Vishwanews24

ಸೈಂಟ್ ಮೇರಿಸ್ ದ್ವೀಪದ ಬಳಿ 420 ಲಕ್ಷ ರೂ ವೆಚ್ಚದಲ್ಲಿ ಫೆರ್ರಿ ಜೆಟ್ಟಿ ನಿರ್ಮಾಣ ಕಾಮಗಾರಿ ಕೈಗೊಳ್ಳುವ ಕುರಿತಂತೆ ಈಗಾಗಲೇ ಸರ್ವೇ ಕಾರ್ಯ ಮುಕ್ತಾಯಗೊಂಡಿದ್ದು,ಸಿಆರ್ ಝಡ್ ವತಿಯಿಂದ ನಿರಾಪೇಕ್ಷಣಾ ಪತ್ರ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ, ತ್ರಾಸಿ ಮರವಂತೆ ಕಡಲ ತೀರದಲ್ಲಿ 1000 ಲಕ್ಷ ವೆಚ್ಚದಲ್ಲಿ ಮೂಲಭೂತ ಸೌಕರ್ಯ ಕಾಮಗಾರಿ ಕೈಗೊಳ್ಳಲು ಈಗಾಗಲೇ 250 ಲಕ್ಷ ಬಿಡುಗಡೆಯಾಗಿದೆ, 1500 ಲಕ್ಷ ವೆಚ್ಚದಲ್ಲಿ ಪಡುವರಿ ಸೋಮೇಶ್ವರ ಬೀಚ್ ಅಭಿವೃಧ್ದಿಗೆ ಕಾಮಗಾರಿಗೆ ಈಗಾಗಲೇ 300 ಲಕ್ಷ ಬಿಡುಗಡೆಯಾಗಿದ್ದು , ಈ ಎಲ್ಲಾ ಕಾಮಗಾರಿಗಳಿಗೆ ಡಿಪಿಆರ್ ತಯಾರಿಸಲಾಗಿದೆ , ಕಾರ್ಕಳದ
ಉಮಿಕಲ್ ಕುಂಜಬೆಟ್ಟದಲ್ಲಿ 200 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪರಶುರಾಮ ಥೀಂ ಪಾರ್ಕ್ ಆಭಿವೃಧ್ದಿ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಪ್ರಸನ್ನ ಹೆಚ್, ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು , ಜಿಲ್ಲೆಯ ವಿವಿಧ ಪ್ರವಾಸೋದ್ಯಮ ಸಂಘಟನೆಗಳ ಮುಖ್ಯಸ್ಥರು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

11 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago