ಮಣಿಪಾಲ : ಉಡುಪಿ ಬೊಮ್ಮರಬೆಟ್ಟುವಿನ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ದಾಳಿ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ
ಪವನ್, ಚೇತನ್ ಸಿ.ಬಿ., ಪಂಜು ಪೊಲೀಸರು ವಶಕ್ಕೆ ಪಡೆದ ಪ್ರಕರಣದ ಆರೋಪಿಗಳು. ಹೆರ್ಗಾ ಗ್ರಾಮದ ಈಶ್ವರ ನಗರದ ರೆಸಿಡೆನ್ಸಿಯೊಂದರ ಸಮೀಪ ಓರ್ವ ವ್ಯಕ್ತಿ ಮಹಿಳೆಯರನ್ನು ಅಕ್ರಮ ವೇಶ್ಯಾವಾಟಿಕೆಗೆ ಕಳುಹಿಸಿಕೊಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣಾ ಪೊಲೀಸರು ಸ್ಥಳಕ್ಕೆ ದಾಳಿ ಮಾಡಿ ಪವನ್ ಎಂಬಾತನನ್ನು ವಶಕ್ಕೆ ಪಡೆದುಕೊಂಡಿದ್ದರು.
ಬಳಿಕ ಈತ ನೀಡಿದ ಮಾಹಿತಿಯ ಆಧಾರದ ಮೇಲೆ ಉಡುಪಿ ಬೊಮ್ಮರಬೆಟ್ಟುವಿನಲ್ಲಿರುವ ಮನೆಯೊಂದಕ್ಕೆ ದಾಳಿ ಮಾಡಿದ ಪೊಲೀಸರು ಚೇತನ್ ಸಿ.ಬಿ. ಮತ್ತು ಪಂಜು ಎಂಬ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ಸುಪ್ರೀಂ ಕೋರ್ಟ್ನಿಂದ ಐವರ ಜಾಮೀನು ರದ್ದು ಅರ್ಜಿ ವಜಾ ನವದೆಹಲಿ : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ…
ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳ ಸರಕಾರಿ ಕಚೇರಿಗಳಲ್ಲಿ ತುಳುವಿಗೆ ಅಧಿಕೃತ ಸ್ಥಾನ ಸಾರ್ವಜನಿಕರು ಇನ್ನು ಮುಂದೆ ತುಳು ಭಾಷೆಯಲ್ಲೇ…
ಮಂಗಳೂರು: ನ.30 ರಂದು ಸಂತ ಅಲೋಶಿಯಸ್ ವಿವಿಯಲ್ಲಿ ಬೃಹತ್ ಉದ್ಯೋಗ ಮೇಳ ಈಗಾಗಲೇ 10,000ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳ ನೋಂದಣಿ ಮಂಗಳೂರು:…
ಮುಖ್ಯಮಂತ್ರಿ ನಿವಾಸ ಹಾಗೂ ವಿಧಾನಸೌಧಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ : ಆರೋಪಿ ಬಂಧನ ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…
ಬೆಂಗಳೂರು - ಮಡಗಾಂವ್ ವಂದೇಭಾರತ್ ರೈಲಿನ ವೇಗ ಹೆಚ್ಚಿಸಲು ಸಂಸದ ಕೋಟ ಮನವಿ ಉಡುಪಿ : ನೂತನವಾಗಿ ಆರಂಭಗೊಂಡ ಬೆಂಗಳೂರು-…
ಆಶಾ ಕಾರ್ಯಕರ್ತೆಯರ ಸೇವೆಯನ್ನು ಆರೋಗ್ಯ ಸಚಿವರು ಅವಮಾನಿಸುತ್ತಿರುವುದು ಖಂಡನೀಯ.. ಆಶಾ ಕಾರ್ಯಕರ್ತರ ಬಗ್ಗೆ ಬೇಜವಾಬ್ದಾರಿ ಹೇಳಿಕೆ ನೀಡಿದ ಸಚಿವ ಖಾದರ್…