Featured

ಮಣಿಪಾಲ : ಮಾದಕ ವಸ್ತು ಮಾರಾಟ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ – vishwanews24

ಮಣಿಪಾಲ : ಮಾದಕ ವಸ್ತು ಮಾರಾಟ ಪ್ರಕರಣ ; ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಣಿಪಾಲ: ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಾಗಿರುವ ಅಜ್ಮಲ್(26) ಬಂಧಿತ ಆರೋಪಿ.

2025ರ ಆ.16ರಂದು ಮಣಿಪಾಲ ಈಶ್ವರ ನಗರದ ರೂಮ್‌ನಲ್ಲಿ ಗಾಂಜಾ ಹಾಗೂ ಎಲ್‌ಎಸ್‌ಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆಪ್ಶಿನ್ ಮತ್ತು ಶಿವನಿಧಿ ಆಚಾರ್ಯ ಎಂಬವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆ ಮುಂದು ವರೆಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ಆರೋಪಿ ಕೇರಳ ಮೂಲದ ಮನೀಶ್ ಎಂಬಾತನನ್ನು 2025ರ ಆ.17ರಂದು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ 4ನೇ ಆರೋಪಿ ಅಜ್ಮಲ್‌ನನ್ನು ಪೊಲೀಸರು 2026ರ ಫೆ.4ರಂದು ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬಂಧಿಸಿದ್ದಾರೆ.

 ಇದನ್ನೂ ಓದಿ:

ಈತನಿಂದ ಸುಮಾರು 1 ಲಕ್ಷ ರೂ. ಮೌಲ್ಯದ 2084 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಈತ ಗಾಂಜಾವನ್ನು ಸರಬರಾಜು ಮಾಡಿದ 5 ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು, ಇವರು ಗಾಂಜಾ ಸೇವಿಸಿದ ಬಗ್ಗೆ ದೃಢಪಟ್ಟಿದೆ. ಗಾಂಜಾ ಸೇವಿಸಿದ ಬಗ್ಗೆ ಈ ಐವರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago