ಮಣಿಪಾಲ: ನಗರದ ಪೊಲೀಸ್ ಠಾಣೆಯಲ್ಲಿ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕನೇ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ರಾಜ್ಯದ ಮಲ್ಲಪುರಂ ಮೂಲದ ಪ್ರಸ್ತುತ ಮಣಿಪಾಲದಲ್ಲಿ ವಾಸವಾಗಿರುವ ಅಜ್ಮಲ್(26) ಬಂಧಿತ ಆರೋಪಿ.
2025ರ ಆ.16ರಂದು ಮಣಿಪಾಲ ಈಶ್ವರ ನಗರದ ರೂಮ್ನಲ್ಲಿ ಗಾಂಜಾ ಹಾಗೂ ಎಲ್ಎಸ್ಡಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಆಪ್ಶಿನ್ ಮತ್ತು ಶಿವನಿಧಿ ಆಚಾರ್ಯ ಎಂಬವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ತನಿಖೆ ಮುಂದು ವರೆಸಿದ ಪೊಲೀಸರು, ಪ್ರಕರಣಕ್ಕೆ ಸಂಬಂಧಿಸಿದ ಮತ್ತೋರ್ವ ಆರೋಪಿ ಕೇರಳ ಮೂಲದ ಮನೀಶ್ ಎಂಬಾತನನ್ನು 2025ರ ಆ.17ರಂದು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ 4ನೇ ಆರೋಪಿ ಅಜ್ಮಲ್ನನ್ನು ಪೊಲೀಸರು 2026ರ ಫೆ.4ರಂದು ಮಣಿಪಾಲ ಸಿಂಡಿಕೇಟ್ ಸರ್ಕಲ್ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಬಂಧಿಸಿದ್ದಾರೆ.
ಇದನ್ನೂ ಓದಿ:
ಈತನಿಂದ ಸುಮಾರು 1 ಲಕ್ಷ ರೂ. ಮೌಲ್ಯದ 2084 ಗ್ರಾಂ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಈತ ಗಾಂಜಾವನ್ನು ಸರಬರಾಜು ಮಾಡಿದ 5 ವ್ಯಕ್ತಿಗಳನ್ನು ವಶಕ್ಕೆ ಪಡೆದಿದ್ದು, ಇವರು ಗಾಂಜಾ ಸೇವಿಸಿದ ಬಗ್ಗೆ ದೃಢಪಟ್ಟಿದೆ. ಗಾಂಜಾ ಸೇವಿಸಿದ ಬಗ್ಗೆ ಈ ಐವರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…