Featured

ಮಣಿಪಾಲ: ಯುವಕನಿಗೆ ಚೂರಿ ಇರಿತ ಪ್ರಕರಣ; ನಾಲ್ವರ ಬಂಧನ – Vishwanews24

ಮಣಿಪಾಲ: ಯುವಕನಿಗೆ ಚೂರಿ ಇರಿತ ಪ್ರಕರಣ; ನಾಲ್ವರ ಬಂಧನ

ಮಣಿಪಾಲ: ಮಣಿಪಾಲದಲ್ಲಿ ಅ.1ರಂದು ರಾತ್ರಿ ವೇಳೆ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು ನಾಲ್ವರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸೈಫ್ ಕುಕ್ಕಿಕಟ್ಟೆ, ಉದಾಫ್ ಚಿಟ್ಪಾಡಿ, ರಾಹುಲ್ ಶೆಟ್ಟಿ ಕಟಪಾಡಿ ಮತ್ತು ಅಫ್ರಿದಿ ದೊಡ್ಡಣಗುಡ್ಡೆ ಎಂದು ಗುರುತಿಸಲಾಗಿದ್ದು ಚೂರಿ ಇರಿತಕ್ಕೆ ಒಳಗಾದ ಪ್ರತಾಪ್(19) ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಪ್ರಕಟಣೆಯ ಪ್ರಕಾರ ಪ್ರತಾಪ್, ತಿಲಕ್ ಮತ್ತು ಹರ್ಷಿತ್ ಎಂಬವರು ಮಣಿಪಾಲ ಬಾಬಾ ಪಾಯಿಂಟ್ ಹೋಟೆಲ್ ಬಳಿ ರಾತ್ರಿ ತಿರುಗಾಡಲು ಹೋಗಿದ್ದು, ಅಲ್ಲಿ ಮೂರು ಜನರು ಇತರರೊಂದಿಗೆ ಸೇರಿ ಗಲಾಟೆ ಮಾಡುತ್ತಿದ್ದರು. ಇದನ್ನು ಪ್ರತಾಪ್ ಪ್ರಶ್ನಿಸಿದ್ದು, ಆಗ ಆರೋಪಿಗಳು ಪ್ರತಾಪ್ಗೆ ಹೊಡೆದು ದೂಡಿದ್ದಾರೆಂದು ದೂರಲಾಗಿದೆ.

ಬಳಿಕ ಪ್ರತಾಪ್, ತಿಲಕ್ ಮತ್ತು ಹರ್ಷಿತ್ನೊಂದಿಗೆ ರಾತ್ರಿ ಮಣಿಪಾಲದ ಎಡ್ಜ್ ಹೊಟೇಲ್ ಬಳಿ ಹೋದಾಗ ಕಾರಿನಲ್ಲಿ ಬಂದ ಇದೇ ಮೂರು ಜನ ಹಾಗೂ ಇತರರು ಪ್ರತಾಪ್ಗೆ ಕೈಯಿಂದ ಹೊಡೆದು ಚೂರಿಯಿಂದ ಕೈಗೆ ಇರಿದು ಗಾಯಗೊಳಿಸಿದ್ದಾರೆ ಎಂದು ದೂರಲಾಗಿದೆ.

ಅದೇ ರೀತಿ ಉದಾಫ್ ಚಿಟ್ಪಾಡಿ ತನ್ನ ಮೇಲೆ ಪ್ರತಾಪ್ ತಂಡ ಕೈ ಹಾಗೂ ಕಲ್ಲಿನಿಂದ ಹಲ್ಲೆ ನಡೆಸಿದೆ ಎಂದು ಪ್ರತಿದೂರು ನೀಡಿದ್ದಾರೆ. ಅದರಂತೆ ಈ ಎರಡೂ ಪ್ರಕರಣಗಳು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

2 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

3 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

4 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

4 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

4 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

5 hours ago