Featured

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ – vishwanews24

ಮಣಿಪಾಲ: ಯುವಕರ ಮೇಲೆ ಹಲ್ಲೆ ; ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ

ಮಣಿಪಾಲ: ಜನನಿ ಬಾರ್ & ರೆಸ್ಟೋರೆಂಟ್ ಎದುರು ಯುವಕರ ಮೇಲೆ ಹಲ್ಲೆ ನಡೆಸಿ, ಮೆಟಲ್ ಪಂಚ್ನಿಂದ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಟ್ಟೆ ಕಾಲೇಜಿನ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಆಗಸ್ಟ್ 2ರಂದು ರಾತ್ರಿ ಸುಮಾರು 11.50ರ ವೇಳೆಗೆ ಯಶ್ರಾಜ್ ಅವರು ತಮ್ಮ ಸಹೋದರ ಪವನ್ ಕುಮಾರ್ ಹಾಗೂ ಸ್ನೇಹಿತ ಶ್ರೇಯಸ್ ಅವರೊಂದಿಗೆ ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಈಶ್ವರನಗರದಲ್ಲಿರುವ ಜನನಿ ಬಾರ್ & ರೆಸ್ಟೋರೆಂಟ್ ಸಮೀಪದ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ, ಆರೋಪಿಗಳಾದ ಅಕ್ಷಯ್ ಎ., ಪುನೀತ್ ಎಸ್., ಶಮಂತ್ ಕೆ.ಆರ್. ಹಾಗೂ ಯಶವಂತ್ ಬಿ.ಜೆ. ಅವರು ಎರಡು ಕಾರುಗಳಲ್ಲಿ ಸ್ಥಳಕ್ಕೆ ಆಗಮಿಸಿ ಪವನ್ ಕುಮಾರ್ ಅವರನ್ನು ತಡೆದಿದ್ದಾರೆ ಎನ್ನಲಾಗಿದೆ.

ಬಳಿಕ ಯಾವುದೇ ಕಾರಣವಿಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೈಯಿಂದ ಹಲ್ಲೆ ನಡೆಸಿ, ಕಾಲಿನಿಂದ ತುಳಿದಿರುವುದಲ್ಲದೆ, ಮೆಟಲ್ ಪಂಚ್ನಿಂದ ಮುಖಕ್ಕೆ ಗುದ್ದಿದ ಪರಿಣಾಮ ಪವನ್ ಕುಮಾರ್ ಅವರ ಮೂಗಿಗೆ ಗಂಭೀರ ಗಾಯವಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಲ್ಲದೆ, ಮಧ್ಯಪ್ರವೇಶಿಸಿದ ಯಶ್ರಾಜ್ ಹಾಗೂ ಶ್ರೇಯಸ್ ಅವರ ಮೇಲೂ ಹಲ್ಲೆ ನಡೆಸಿ, ಬಟ್ಟೆಗಳನ್ನು ಹರಿದು, ಜೀವ ಬೆದರಿಕೆ ಹಾಕಿ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು ಎಂದು ತಿಳಿದುಬಂದಿದೆ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ತನಿಖೆ ವೇಳೆ ಬಂಧಿತ ನಾಲ್ವರೂ ನಿಟ್ಟೆ ಕಾಲೇಜಿನ ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿರುವುದು ಬೆಳಕಿಗೆ ಬಂದಿದೆ. ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ತಿಮ್ಮೇಶ್ ಬಿ.ಎನ್. ನಡೆಸುತ್ತಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago