Featured

ಮಣಿಪಾಲ: ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು : ಪೋಲಿಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಕಳ್ಳಿಯರ ಬಂಧನ – VIshwanews24

ಮಣಿಪಾಲ: ರೈಲು ಹತ್ತುವ ವೇಳೆ ಚಿನ್ನಾಭರಣ ಕಳವು : ಪೋಲಿಸರ ಕ್ಷಿಪ್ರ ಕಾರ್ಯಾಚರಣೆ – ಇಬ್ಬರು ಕಳ್ಳಿಯರ ಬಂಧನ

ಮಣಿಪಾಲ : ರೈಲು ಹತ್ತುವ ಸಂಧರ್ಭದಲ್ಲಿ ವ್ಯಾನಿಟಿ ಬ್ಯಾಗ್ ನಿಂದ ಸುಮಾರು 4 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೋಲಿಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಚಿನ್ನಾಭರಣ ಕಳವುಗೈದ ಇಬ್ಬರು ಮಹಿಳೆಯರನ್ನು ಮಣಿಪಾಲ ಪೋಲಿಸರು ಬಂದಿಸಿದ್ದಾರೆ.

ಮಾರ್ಚ್ 14 ರಂದು ಪುನೀತ್ ವಸಂತ್ ಹೆಗ್ಡೆ ಎಂಬವರು ಇಂದ್ರಾಳಿ ರೈಲ್ವೆ ನಿಲ್ದಾಣದಲ್ಲಿ ತಮ್ಮ ಕುಟುಂಬದವರೊಂದಿಗೆ ಮಂಗಳೂರು – ಮುಂಬಯಿ ನಡುವೆ ಸಂಚರಿಸುವ ರೈಲು ಹತ್ತುವ ವೇಳೆ ಬಂಗಾರದ ಒಡವೆಗಳನ್ನು ವ್ಯಾನಿಟಿ ಬ್ಯಾಗ್ ನಲ್ಲಿ ಇಟ್ಟಿದ್ದರು. ಇಂದ್ರಾಳಿ ರೈಲು ನಿಲ್ದಾಣದಿಂದ ರೈಲು ಹೊರಟಾಗ ವ್ಯಾನಿಟಿ ಬ್ಯಾಗ್ ನ ಜಿಪ್ ತೆರೆದಿರುವುದು ಪುನೀತ್ ಅವರ ಗಮನಕ್ಕ ಬಂದಿದ್ದು, ಬ್ಯಾಗ್ ನ ಒಳಗಿದ್ದ ಚಿನ್ನಾಭರಣಗಳ ಕವರ್ ಕೂಡಾ ಕಾಣೆಯಾಗಿತ್ತು, ಕಾಣೆಯಾದ ಚಿನ್ನಾಭರಣಗಳ ಮೌಲ್ಯ ಸುಮಾರು 4 ಲಕ್ಷದಾಗಿದ್ದು ಮಣಿಪಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣ ದಾಖಲಾದ ತಕ್ಷಣ  ಆರೋಪಿಯ ಪತ್ತೆ ಬಗ್ಗೆ, ಮಣಿಪಾಲ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ, ಪಿಎಸ್ಐ ನವೀನ್ ನಾಯ್ಕ, ಎ.ಎಸ್.ಐ ಶೈಲೇಶ್, ಹೆಚ್ ಸಿ, ಇಮ್ರಾನ್, ಶುಭ, ಅರಣ ಚಾಳೇಕರ್ ತಂಡ ರೈಲೆ ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೆ ಪೊಲೀಸರ ಸಹಕಾರದೊಂದಿಗೆ ಸಿಸಿಟಿವಿ ದ್ರಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಮಾಹಿತಿ ಪಡೆದು ಅದರ ಆಧಾರದ ಮೇಲೆ ತಕ್ಷಣ ಕಾರ್ಯಾಚರಣೆ ನಡೆಸಿ ಘಟನೆ ನಡೆದ 8 ಗಂಟೆಗಳ ಒಳಗೆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.

ಬಂಧಿತರನ್ನು ಶಿವಮೊಗ್ಗ ಜಿಲ್ಲೆಯ ಲಲಿತಾ ಬೋವಿ (41) ಮತ್ತು ಭದ್ರಾವತಿಯ ಸುಶೀಲಮ್ಮ (64) ಎಂದು ಗುರುತಿಸಲಾಗಿದೆ. ಇವರು ಗಮನ ಬೇರೆಡೆ ಸೆಳೆದು ಕಳ್ಳತನ ಮಾಡುವುದು, ಪಿಕ್ ಪಾಕೆಟ್ ಹಾಗೂ ಜನಸಂದಣಿಯಲ್ಲಿ ಹಿರಿಯ ನಾಗರಿಕರನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುವ ಚಾಳಿ ಉಳ್ಳವರಾಗಿರುವುದು ತನಿಖೆಯಿಂದ ಕಂಡು ಬಂದಿರುತ್ತದೆ. ಇವರ ವಿರುದ್ಧ ಈ ಹಿಂದೆ ದಾವಣಗೆರೆ ಜಿಲ್ಲೆಯಲ್ಲಿ ಹೊನ್ನಾಳಿ ಪೊಲೀಸ್ ಠಾಣಿ ಸೇರಿದಂತೆ ರಾಜ್ಯಾದ ಇತರೆ ಕಡೆಗಳಲಿ ಪ್ರಕರಣ ದಾಖಲಾಗಿರುವುದು ಕಂಡು ಬಂದಿರುತ್ತದೆ, ಆರೋಪಿತರನ್ನು, ದಸ್ತಗಿರಿ ಮಾಡಿ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

12 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

14 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

15 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

15 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

15 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

16 hours ago