Featured

ಮಣಿಪಾಲ: ರೈಲು ಹತ್ತುವ ಸಮಯದಲ್ಲಿ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನ ಕಳವು – Vishwanews24

ಮಣಿಪಾಲ: ರೈಲು ಹತ್ತುವ ಸಮಯದಲ್ಲಿ ಬ್ಯಾಗ್ ನಲ್ಲಿದ್ದ 4 ಲಕ್ಷ ರೂ. ಮೌಲ್ಯದ ಚಿನ್ನ ಕಳವು

ಮಣಿಪಾಲ: ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಮಯದಲ್ಲಿ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಎಗರಿಸಿದ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ದೂರು ದಾಖಲಾಗಿದೆ.

ಪುನೀತ ವಸಂತ್ ಹೆಗ್ಡೆ ತಮ್ಮ ಕುಟುಂಬದೊಂದಿಗೆ ಮುಂಬಿಯಿಗೆ ಹೋಗಲು ಮಾ.14 ರಂದು ಮಂಗಳೂರು – ಮುಂಬಯಿ ಎಕ್ಸ್ ಪ್ರೆಸ್ ರೈಲು ನಂಬ್ರ 12134 ರಲ್ಲಿ ಏರಿದ್ದರು. ಇದಕ್ಕೂ ಮುನ್ನ ತಮ್ಮ ವ್ಯಾನಿಟಿ ಬ್ಯಾಗ್ ನಲ್ಲಿ ಬಂಗಾರದ ಒಡವೆಗಳನ್ನು ಒಂದು ಕವರ್ ನಲ್ಲಿ ಹಾಕಿ ಬಟ್ಟೆಗಳ ಮಧ್ಯೆ ಇಟ್ಟಿದ್ದು ಬ್ಯಾಗನ್ನು ಹೆಗಲಿನಲ್ಲಿ ಹಾಕಿಕೊಂಡಿದ್ದರು. ಇಂದ್ರಾಳಿ ರೈಲು ನಿಲ್ದಾಣದಿಂದ ರೈಲು ಹೊರಟಿದ್ದು ಸೀಟ್ ನಲ್ಲಿ ಕುಳಿತಾಗ ಪುನೀತ ಅವರ ವ್ಯಾನಿಟಿ ಬ್ಯಾಗ್ ಝಿಫ್ ತೆರೆದಿರುವುದು ಕಂಡು ಬಂದಿದ್ದು, ಬ್ಯಾಗ್ ಪರಿಶೀಲಿಸಿದಾಗ ಬ್ಯಾಗ್ ನ ಓಳಗೆ ಇಟ್ಟಿದ್ದ ಬಂಗಾರದ ಒಡೆವೆಗಳ ಕವರ್ ಕಾಣೆಯಾಗಿತ್ತು.

ಮಧ್ಯಾಹ್ನ 03:35 ಗಂಟೆಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ಸಮಯ ಯಾರೋ ಕಳ್ಳರು ವ್ಯಾನಿಟಿ ಬ್ಯಾಗ್ ಝಿಫ್ ನ್ನು ತೆರೆದು ಬ್ಯಾಗ್ ನಲ್ಲಿದ್ದ ಬಂಗಾರದ ಒಡವೆಗಳನ್ನು ಹಾಗೂ ವ್ಯಾಚ್ ನ್ನು ಕಳವು ಮಾಡಿದ್ದಾರೆ. ಕಳುವಾದ ಚಿನ್ನಾಭರಣಗಳ ಅಂದಾಜು ತೂಕ 100 ಗ್ರಾಂ ಆಗಿದ್ದು, ಅಂದಾಜು ಮೌಲ್ಯ 4,00,000 ಆಗಿರುತ್ತದೆ, ಹಾಗೂ ಕಳುವಾದ ವ್ಯಾಚ್ ನ ಅಂದಾಜು ಬೆಲೆ 3000 ಆಗಿರುತ್ತದೆ, ಕಳುವಾದ ಸ್ವತ್ತುಗಳ ಒಟ್ಟು ಮೌಲ್ಯ 4,03,000 ರೂಪಾಯಿ ಆಗಿರುತ್ತದೆ. ಈ ಬಗ್ಗೆ ಮಣಿಪಾಲ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 52/2023 ಕಲಂ: 379 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

5 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

5 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

6 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

6 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

6 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

7 hours ago