ಮಣಿಪಾಲ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ :- ತ್ವರಿತ ತನಿಖೆಗೆ ಎಬಿವಿಪಿ ಆಗ್ರಹ: vishwanews24
ಉಡುಪಿ: ದಿನಾಂಕ 16.10.2021 ರಂದು ಮಣಿಪಾಲದಲ್ಲಿರುವ ಇಂಜಿನಿಯರಿಂಗ್ ಕಾಲೇಜ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸ್ ಇಲಾಖೆ ವಿದ್ಯಾರ್ಥಿನಿಯ ಹೇಳಿಕೆಯನ್ನು ಪಡೆದುಕೊಂಡು ಕೇವಲ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆದರೆ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿತರ ಆರೋಪಿಗಳು ತಲೆ ಮರಿಸಿಕೊಂಡು ಪರಾರಿಯಾಗಿದ್ದಾರೆ. ಆದರೆ ಪೊಲೀಸ್ ಇಲಾಖೆ ಮಾತ್ರ ಇದೊಂದು ಗ್ಯಾಂಗ್ ರೇಪ್ ಅಲ್ಲ ಎಂದು ಹೇಳುತ್ತಿದ್ದಾರೆ.ಆದ್ದರಿಂದ ಪೊಲೀಸ್ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿತರ ಆರೋಪಿಗಳನ್ನು ಬಂಧಿಸಬೇಕು ಎಂದು ವಿದ್ಯಾರ್ಥಿ ಪರಿಷತ್’ ಆಗ್ರಹಿಸಿ ಇಂದು ಮಣಿಪಾಲ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಅಭಾವಿಪದ ವತಿಯಿಂದ ಪ್ರತಿಭಟನೆ ನಡೆಯಿತು.
ಉಡುಪಿ ಮತ್ತು ಮಣಿಪಾಲ ಸುತ್ತಮುತ್ತಲಿನ ಹಲವಾರು ಬಾರ್ & ರೆಸ್ಟೋರೆಂಟ್, ಪಬ್ ರಾತ್ರಿ 2 ಅಥವಾ 3 ಗಂಟೆಯ ವರೆಗೂ ಚಾಲ್ತಿಯಲ್ಲಿರುವುದು ಸಾರ್ವಜನಿಕರ ಗಮನಕ್ಕೆ ಬಂದಿರುತ್ತದೆ. ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನ ಹಿನ್ನೆಲೆಯಲ್ಲಿ ಈ ಹಿಂದೆ ನೈಟ್ ಕರ್ಪ್ಯೂ ಜಾರಿಯಲ್ಲಿದ್ದರು ಸಹ ಪುಂಡ ಪೋಕರಿಗಳ ಪುಂಡಾಟಿಕೆಗಳಿಗೆ ಕಡಿವಾಣ ಹಾಕಲು ಪೋಲಿಸ್ ಇಲಾಖೆ ಮಾತ್ರ ವಿಫಲವಾಗಿದೆ. ಅಲ್ಲದೇ ನಗರದಲ್ಲಿ ಡ್ರಗ್ಸ್ ಜಾಲವನ್ನು ಜಾಲಾಡಿ ದಂಧೆಯಲ್ಲಿ ತೊಡಗಿ ಕೊಂಡವರನ್ನು ಬಂಧಿಸಬೇಕು, ಡ್ರಗ್ಸ್ ಮುಕ್ತ – ಭಯ ಮುಕ್ತ ಸಮಾಜವನ್ನು ನಿರ್ಮಾಣ ಮಾಡಬೇಕೆಂದು ಎಬಿವಿಪಿ ಸಂಘಟನೆ ಆಗ್ರಹಿಸಿತು.
ರಾಜ್ಯದಲ್ಲಿ ಈಗಾಗಲೇ ಅತ್ಯಾಚಾರ, ಸಾಮೂಹಿಕ ಅತ್ಯಾಚಾರದಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರು ಸಹ ರಾಜ್ಯ ಸರಕಾರ ಯಾವುದೇ ಗಂಭೀರವಾದ ಕ್ರಮವನ್ನು ಕೈಗೊಳ್ಳುತ್ತಿಲ್ಲ, ಆದ್ದರಿಂದ ರಾಜ್ಯದ ಮುಖ್ಯಮಂತ್ರಿಗಳು ಮತ್ತು ಗೃಹ ಮಂತ್ರಿಗಳು ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪುಂಡ ಪೋಕರಿಗಳು, ಅತ್ಯಾಚಾರಿಗಳು, ಡ್ರಗ್ಸ್ ಜಾಲದಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ಹೆಡೆಮುರಿ ಕಟ್ಟಿ ಸ್ವಸ್ಥ ಸಮಾಜವನ್ನು ನಿರ್ಮಾಣ ಮಾಡಬೇಕೆಂದು ಎಬಿವಿಪಿಯ ನಗರ ಕಾರ್ಯದರ್ಶಿ ಸುಮುಖ ಭಟ್ ಆಗ್ರಹಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…