Featured

ಮಣಿಪಾಲ ವೇಶ್ಯಾವಾಟಿಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ಬಂಧನ – vishwanews24

ಮಣಿಪಾಲ ವೇಶ್ಯಾವಾಟಿಕೆ ಪ್ರಕರಣ: ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳು ಪಶ್ಚಿಮ ಬಂಗಾಳದಲ್ಲಿ ಬಂಧನ

ಮಣಿಪಾಲ: ವೇಶ್ಯಾವಾಟಿಕೆ ನಡೆಸಲು ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ನಗರಕ್ಕೆ ಪೂರೈಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಳೆದ 1 ವರ್ಷದಿಂದ ತಲೆಮರೆಸಿಕೊಂಡಿದ್ದ ಇಬ್ಬರು ಪಿಂಪ್‌ಗಳನ್ನು ಮಣಿಪಾಲ ಠಾಣೆ ಪೊಲೀಸರು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯಲ್ಲಿ ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಕಾಳಿಧಾಮ್ ಕಾಲೋನಿ ಪಿಎಸ್ ಡಮ್‌ಡಮ್ ನಿವಾಸಿ ಎಸ್ತಾರ್ ಶಾಹ ಯಾನೆ ಕಾಜಲ್ (40) ಹಾಗೂ ಅರಬಿಂದಾ ಸರಾನಿ ಕಾಲಿಧಾಮ್ ಕಾಲೋನಿಯ ಸಂಜಯ (49) ಬಂಧಿತ ಆರೋಪಿಗಳು.

2025ರಲ್ಲಿ ಆರೋಪಿಗಳು ನಗರಕ್ಕೆ ಪಶ್ಚಿಮ ಬಂಗಾಳದಿಂದ ಮಹಿಳೆಯರನ್ನು ಕರೆಯಂದು ಇಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಅಂದು ಸ್ಥಳಕ್ಕೆ ಪೊಲೀಸರು ದಾಳಿ ನಡೆಸಿ ಮಹಿಳೆಯರನ್ನು ರಕ್ಷಿಸಿದ್ದು, ಈ ವೇಳೆ ಪಿಂಪ್‌ಗಳಿಬ್ಬರು ಪರಾರಿಯಾಗಿದ್ದರು. ಆರೋಪಿಗಳ ಬಗ್ಗೆ ಕುರುಹು ಸಿಗುತ್ತಿದ್ದಂತೇ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರ ನೇತೃತ್ವದಲ್ಲಿ ರಚನೆಯಾದ ತಂಡವು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಸಿಲಿಗುರಿಯ ನೇತಾಜಿ ನಗರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳನ್ನು ಉಡುಪಿಯ ಎರಡನೇ ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಿರುವ ಪೊಲೀಸರು, ಹೆಚ್ಚಿನ ತನಿಖೆಗೆ ಆರೋಪಿಗಳನ್ನು ಕಸ್ಟಡಿಗೆ ಪಡೆದುಕೊಂಡಿದ್ದಾರೆ.

Vishwa News 24

Recent Posts

ಮಂಗಳೂರು: ಮಂತ್ರದೇವತೆ ಸನ್ನಿಧಿ ಶ್ರೀ  ಕ್ಷೇತ್ರ ಮಂದಾರಬೈಲು ನ.14ರಂದು ದೀಪಾಲಂಕಾರ ಸೇವೆ : Vishwanews24

ಮಂಗಳೂರು: ಮಂತ್ರದೇವತೆ ಸನ್ನಿಧಿ ಶ್ರೀ  ಕ್ಷೇತ್ರ ಮಂದಾರಬೈಲು ನ.14ರಂದು ದೀಪಾಲಂಕಾರ ಸೇವೆ  ಮಂಗಳೂರು: ಕೊಂಚಾಡಿ ದೇರೆಬೈಲ್‌ನ ಶ್ರೀ ಕ್ಷೇತ್ರ ಮಂದಾರಬೈಲು…

44 minutes ago

ಕಾರವಾರ: ಚಮನ್ ಮೀನು ವಿಷಕಾರಿ ಅನಿಲ ದುರಂತಕ್ಕೆ ಐವರು ಮೀನುಗಾರರು ಬಲಿ;  ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ – vishwanews24

ಕಾರವಾರ: ಚಮನ್ ಮೀನು ವಿಷಕಾರಿ ಅನಿಲ ದುರಂತಕ್ಕೆ ಐವರು ಮೀನುಗಾರರು ಬಲಿ;  ಜಿಲ್ಲಾಡಳಿತದಿಂದ ಮುನ್ನೆಚ್ಚರಿಕೆ ಕ್ರಮ ಕಾರವಾರ : ಉತ್ತರ…

51 minutes ago

ಮಂಗಳೂರು: ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯ : ಸಚಿವ ಅಶ್ವಿನಿ ವೈಷ್ಣವ್ – vishwanews24

ಮಂಗಳೂರು: ಕೊಂಕಣ ರೈಲ್ವೆ ವಿಲೀನಕ್ಕೆ ನಾಲ್ಕು ರಾಜ್ಯಗಳ ಒಪ್ಪಿಗೆ ಅಗತ್ಯ : ಸಚಿವ ಅಶ್ವಿನಿ ವೈಷ್ಣವ್ ಮಂಗಳೂರು: ಕೊಂಕಣ ರೈಲ್ವೆ…

1 hour ago

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ. ಖಾದರ್ – vishwanews24

ಅಡುಗೆ ಎಣ್ಣೆ ಮರುಬಳಕೆಗೆ ಕಡಿವಾಣ; ರಾಜ್ಯಾದ್ಯಂತ ಟ್ರೇಸಬಿಲಿಟಿ ಆ್ಯಪ್ ಜಾರಿ : ಸಚಿವ ಯು.ಟಿ.ಖಾದರ್ ಬೆಂಗಳೂರು : ಹೋಟೆಲ್, ರೆಸ್ಟೋರೆಂಟ್…

1 hour ago

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ​​ಬಳಿ ಮಾನವನ ತಲೆಬುರುಡೆ ಪತ್ತೆ! vishwanews24

ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ​​ಬಳಿ ಮಾನವನ ತಲೆಬುರುಡೆ ಪತ್ತೆ! ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ…

2 hours ago

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸ್ವಾಗತ – vishwanews24

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ: ಸಿಎಂ ಡಿಕೆಶಿ ಸ್ವಾಗತ ಬೆಂಗಳೂರು: ಒಂದು ದಿನದ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ…

2 hours ago