ಮಣಿಪಾಲ: ಸಿಟಿ ಬಸ್ ಢಿಕ್ಕಿ- ವ್ಯಕ್ತಿ ಮೃತ್ಯು – vishwanews24
ಮಣಿಪಾಲ: ಸಿಟಿ ಬಸ್ ಢಿಕ್ಕಿ- ವ್ಯಕ್ತಿ ಮೃತ್ಯು
ಉಡುಪಿ: ಸಿಟಿ ಬಸ್ ಢಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ಇಂದು ಸಂಜೆ ನಡೆದಿದೆ.
ಈಶ್ವರ ನಗರದ ನಿವಾಸಿ ಮಹಾಬಲ ಶೆಟ್ಟಿಗಾರ್ (78) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದೆ.
ಘಟನ ಸ್ಥಳಕ್ಕೆ ಮಣಿಪಾಲ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಸಂದರ್ಭದಲ್ಲಿ ಈ ಭಾಗದಲ್ಲಿ ಸಂಪೂರ್ಣ ಟ್ರಾಫಿಕ್ ದಟ್ಟನೆ ಉಂಟಾಯಿತು. ಬಸ್ಸು ಮಣಿಪಾಲದಿಂದ ಪರ್ಕಳದತ್ತ ತೆರಳುತ್ತಿತ್ತು ಎನ್ನಲಾಗಿದೆ. ಈ ವೇಳೆ ವ್ಯಕ್ತಿ ಬಸ್ಸಿಗೆ ಅಡ್ಡಲಾಗಿ ಬಂದ ಕಾರಣ, ಬಸ್ ವ್ಯಕ್ತಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
