ಮಣಿಪಾಲ : ಸ್ಕೂಟಿ ಹಾಗೂ ಬೈಕ್ ನಡುವೆ ಅಪಘಾತ ನಡೆದ ಪರಿಣಾಮ ಬೈಕ್‌ನ ಸಹಸವಾರೆಯಾಗಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಹಿರಿಯಡಕದ ಸುಶ್ಮಿತಾ (19) ಎಂದು ಗುರುತಿಸಲಾಗಿದೆ.
ಕಾಯಿನ್ ಸರ್ಕಲ್‌ನಿಂದ ಸಿಂಡಿಕೇಟ್ ಸರ್ಕಲ್‌ಗೆ ಸ್ಕೂಟಿ ಮತ್ತು ಬೈಕ್ ಗಳೆರಡೂ ತೆರಳುತ್ತಿತ್ತು. ಈ ವೇಳೆ ಸ್ಕೂಟಿ ಸವಾರ ಸಿಗ್ನಲ್ ನೀಡದೆ ಒಮ್ಮೆಲೇ ಬಲಕ್ಕೆ ತಿರುಗಿದ್ದಾನೆ. ಪರಿಣಾಮ ಬೈಕ್ ಸವಾರ ಸ್ಕೂಟಿಗೆ ಢಿಕ್ಕಿ ಹೊಡೆದಿದ್ದಾನೆ.
ಢಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಸುಶ್ಮಿತಾ ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನು ಸುಶ್ಮಿತಾ ನಗರದ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…