ಮಣಿಪಾಲ: ಹೊಟೇಲ್ ಕಾರ್ಮಿಕ ಅನುಮಾನಾಸ್ಪದ ಸಾವು , ಸಹೋದರನಿಂದ ದೂರು ದಾಖಲು – vishwanews24
ಮಣಿಪಾಲ: ಹೊಟೇಲ್ ಕಾರ್ಮಿಕ ಅನುಮಾನಾಸ್ಪದ ಸಾವು , ಸಹೋದರನಿಂದ ದೂರು ದಾಖಲು
ಮಣಿಪಾಲ: ಹೊಟೇಲ್ ಕಾರ್ಮಿಕರೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಆ.9ರಂದು ರಾತ್ರಿ ವೇಳೆ ಮಣಿಪಾಲದಲ್ಲಿ ನಡೆದಿದೆ.
ಮೃತರನ್ನು ಉಳ್ಳೂರು ಗ್ರಾಮದ ಉದಯ(43) ಎಂದು ಗುರುತಿಸಲಾಗಿದೆ.
ಇವರು ಮಣಿಪಾಲದ ಯುವರ್ ಚಾಯ್ಸ್ ಎಂಬ ಹೋಟೆಲಿನಲ್ಲಿ ಕೆಲಸ ಮಾಡಿಕೊಂಡಿದ್ದು, ಅಲ್ಲಿ ಅಸೌಖ್ಯದಿಂದ ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದರು, ಅವರನ್ನು ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಆದರೆ ಇವರ ಮರಣದಲ್ಲಿ ಸಂಶಯ ಇದೆ ಎಂದು ಮೃತರ ಸಹೋದರ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ : ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ – vishwanews24
