Featured

ಮಣಿಪಾಲ: ಹೊಸವರ್ಷದ ಸಂಭ್ರಮಾಚರಣೆ ನೆಪದಲ್ಲಿ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆ; 14 ಜನ ವಶಕ್ಕೆ – vishwanews24

ಮಣಿಪಾಲ: ಹೊಸವರ್ಷದ ಸಂಭ್ರಮಾಚರಣೆ ನೆಪದಲ್ಲಿ ಸಂಚಾರಕ್ಕೆ ಹಾಗೂ ಸಾರ್ವಜನಿಕರಿಗೆ ತೊಂದರೆ; 14 ಜನ ವಶಕ್ಕೆ

ಮಣಿಪಾಲ : ಹೊಸವರ್ಷದ ಸಂಭ್ರಮಾಚರಣೆ ನೆಪದಲ್ಲಿ ಸುಗಮ ಸಂಚಾರಕ್ಕೆ ಹಾಗೂ ಸಾರ್ವಜನಿಕರ ನೆಮ್ಮದಿಗೆ ಅಡ್ಡಿ ಉಂಟು ಮಾಡಿದ ಹಿನ್ನಲೆಯಲ್ಲಿ ಮಣಿಪಾಲ ಪೊಲೀಸರು ಒಂದು ಕಾರು, ಎಂಟು ದ್ವಿಚಕ್ರ ವಾಹನ ಹಾಗೂ 14 ಜನ ಆರೋಪಿತರನ್ನು ವಶಕ್ಕೆ ಪಡೆದಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ ರಾಘವೇಂದ್ರ ಸಿ ಹಾಗೂ ಸಿಬ್ಬಂದಿಗಳು ಹೊಸವರ್ಷದ ಮದ್ಯರಾತ್ರಿ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ರೌಂಡ್ಸ್ ಕರ್ತವ್ಯದಲ್ಲಿರುವಾಗ ಮಣಿಪಾಲದ ರಸ್ತೆಯಲ್ಲಿ ಸುಮಾರು 7 ರಿಂದ 10 ಜನರು ಕಾರು ಹಾಗೂ ದ್ವಿ ಚಕ್ರ ವಾಹನಗಳಲ್ಲಿ ಸವಾರಿ ಮಾಡಿಕೊಂಡು ಬಂದು ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ ನೀಡಿದ್ದರು.

ಬೈಕ್ ನ ಸೈಲೆನ್ಸರ್‌ ನಲ್ಲಿ ಬೆಂಕಿಯ ಕಿಡಿ ಬರುವ ರೀತಿಯಲ್ಲಿ ಅಪಾಯಕಾರಿಯಾಗಿ ದುಡುಕುತನ ಹಾಗೂ ನಿರ್ಲಕ್ಷ್ಯತೆಯಿಂದ ಚಾಲನೆ ರಸ್ತೆಯ ಮದ್ಯದಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಸುಗಮ ಸಂಚಾರಕ್ಕೆ ತೊಂದರೆ ಕೊಟ್ಟ ಹಿನ್ನಲೆಯಲ್ಲಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 01/2024 ಕಲಂ: 143, 147, 279, 290 ಜೊತೆಗೆ 149 ಐ ಪಿ ಸಿ ಯಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತನಿಖೆಕೈಗೊಂಡಿದ್ದಾರೆ

ಈ ಪ್ರಕರಣದಲ್ಲಿ ಆರೋಪಿತರ ಪತ್ತೆ ಬಗ್ಗೆ ಮಣಿಪಾಲ ಠಾಣಾ ಪೊಲೀಸ್ ನಿರೀಕ್ಷಕರಾದ ದೇವರಾಜ ಟಿ ವಿ ರವರ ನೇತೃತ್ವದಲ್ಲಿ ಪೊಲೀಸ್‌ ಉಪನಿರೀಕ್ಷಕರಾದ ರಾಘವೆಂದ್ರ ಸಿ, ಅಕ್ಷಯಾ ಕುಮಾರಿ ಎಸ್ ಎನ್, ಪ್ರೊ ಪಿ ಎಸ್ ಐ ಲೋಹಿತ್, ಎ ಎಸ್‌ ಐ ವಿವೇಕಾನಂದ, ಅಬ್ದುಲ್‌ ರಜಾಕ್, ಪ್ರಸನ್ನ, ಇಮ್ರಾನ್, ಮಂಜುನಾಥ ಎಂ ಆರ್, ಚನ್ನೇಶ್ ಕೆ ಹೆಚ್, ಬಸವರಾಜ್ ಶೆಟ್ಟಿ, ರವರನ್ನೊಳಗೊಂಡ ತಂಡ ಘಟನೆಗೆ ಸಂಬಂದಿಸಿದ ಸಾಮಾಜಿಕ ಜಾಲತಾಣದ ವಿಡಿಯೋ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿ ಪ್ರಕರಣಕ್ಕೆ ಸಂಬಂದಪಟ್ಟ ವಾಹನಗಳನ್ನು ಪತ್ತೆ ಮಾಡಿದ್ದು ವಾಹನಗಳನ್ನು ಜಪ್ತಿ ಮಾಡಿ, 14 ಜನ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿ ತನಿಖೆ ಕೈಗೊಂಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

13 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

13 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

14 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

14 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

14 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

14 hours ago