Featured

ಮಣಿಪಾಲ : MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್​ ಈಗ ಕಂಟೇನ್ಮೆಂಟ್ ಜೋನ್ -Vishwanews24

MIT ಕಾಲೇಜಿನಲ್ಲಿ 52 ವಿದ್ಯಾರ್ಥಿಗಳಿಗೆ ಕೊರೊನಾ ದೃಢ ; ಕಾಲೇಜು ಕ್ಯಾಂಪಸ್​ ಈಗ ಕಂಟೇನ್ಮೆಂಟ್ ಜೋನ್ -Vishwanews24

ಉಡುಪಿ: ಜಿಲ್ಲೆಯ ಮಣಿಪಾಲದಲ್ಲಿರುವ ಪ್ರತಿಷ್ಠಿತ MIT ಕಾಲೇಜಿನಲ್ಲಿ ಇಂದು 27 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು 52 ವಿದ್ಯಾರ್ಥಿಗಳು ಕೊರೊನಾ ಸೋಂಕಿತರಾಗಿದ್ದಾರೆ.

ಆದ್ದರಿಂದ ಕಾಲೇಜು ಕ್ಯಾಂಪಸ್​ನ ಇದೀಗ ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಕಾಲೇಜಿಗೆ ಬಂದಿದ್ದ ಅಂತಾರಾಜ್ಯ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ, ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲೂ ಕೊರೊನಾ ಪತ್ತೆಯಾಗಿದೆ ಎಂದು ಉಡುಪಿ ಡಿಹೆಚ್​ಒ ಡಾ.ಸುಧೀರ್ ಚಂದ್ರಸೂಡ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಮಂಗಳೂರು: ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ , ಕಾಲೇಜ್ ಸೀಲ್ಡೌನ್ -Vishwanews24

ರಾಜ್ಯದಲ್ಲಿಂದು ಹೊಸದಾಗಿ 1,275 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 9,63,614ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾದಿಂದ 12,407 ಜನರ ಅಸುನೀಗಿದ್ದಾರೆ. ಇದಲ್ಲದೆ, ಸೋಂಕಿತರ ಪೈಕಿ 9,40,968 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 10,220 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 786 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,13,485ಕ್ಕೇರಿದೆ. ಇಂದು ನಗರದಲ್ಲಿ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಈವರೆಗೆ ಕೊರೊನಾಗೆ 4,530 ಜನರ ಅಸುನೀಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ : ಉಡುಪಿ: ಪ್ರಯಾಣಿಕರು ಮಾಸ್ಕ್ ಧರಿಸದೆ ಪ್ರಯಾಣಿಸಿದಲ್ಲಿ ಬಸ್ಸುಗಳ ಪರವಾನಿಗೆ ರದ್ದು, ಮಾಲಿಕರ ವಿರುದ್ದ ಪ್ರಕರಣ ದಾಖಲು : ಜಿಲ್ಲಾಧಿಕಾರಿ ಜಿ ಜಗದೀಶ್ -Vishwanews24

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

13 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

13 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

14 hours ago