ಉಡುಪಿ: ಜಿಲ್ಲೆಯ ಮಣಿಪಾಲದಲ್ಲಿರುವ ಪ್ರತಿಷ್ಠಿತ MIT ಕಾಲೇಜಿನಲ್ಲಿ ಇಂದು 27 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು 52 ವಿದ್ಯಾರ್ಥಿಗಳು ಕೊರೊನಾ ಸೋಂಕಿತರಾಗಿದ್ದಾರೆ.
ಆದ್ದರಿಂದ ಕಾಲೇಜು ಕ್ಯಾಂಪಸ್ನ ಇದೀಗ ಕಂಟೇನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಕಾಲೇಜಿಗೆ ಬಂದಿದ್ದ ಅಂತಾರಾಜ್ಯ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ, ಸೋಂಕಿತರ ಪ್ರಾಥಮಿಕ ಸಂಪರ್ಕಿತರಲ್ಲೂ ಕೊರೊನಾ ಪತ್ತೆಯಾಗಿದೆ ಎಂದು ಉಡುಪಿ ಡಿಹೆಚ್ಒ ಡಾ.ಸುಧೀರ್ ಚಂದ್ರಸೂಡ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಮಂಗಳೂರು: ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ದೃಢ , ಕಾಲೇಜ್ ಸೀಲ್ಡೌನ್ -Vishwanews24
ರಾಜ್ಯದಲ್ಲಿಂದು ಹೊಸದಾಗಿ 1,275 ಜನರಿಗೆ ಕೊರೊನಾ ದೃಢವಾಗಿದೆ. ಇದೀಗ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 9,63,614ಕ್ಕೇರಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಈವರೆಗೆ ಕೊರೊನಾದಿಂದ 12,407 ಜನರ ಅಸುನೀಗಿದ್ದಾರೆ. ಇದಲ್ಲದೆ, ಸೋಂಕಿತರ ಪೈಕಿ 9,40,968 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 10,220 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 786 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,13,485ಕ್ಕೇರಿದೆ. ಇಂದು ನಗರದಲ್ಲಿ ಕೊರೊನಾ ಸೋಂಕಿಗೆ ಮೂವರು ಬಲಿಯಾಗಿದ್ದಾರೆ. ಈವರೆಗೆ ಕೊರೊನಾಗೆ 4,530 ಜನರ ಅಸುನೀಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…