ತೆಲುಗಿನ ಖ್ಯಾತ ನಟ ವಿಜಯ್ ದೇವರಕೊಂಡ ತಮ್ಮ ಜೀವನದಲ್ಲಿ ಅತ್ಯುತ್ತಮ ನಿರ್ಧಾರವೊಂದನ್ನು ತಗೆದುಕೊಂಡಿದ್ದಾರೆ. ಆ ನಿರ್ಧಾರವನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಮನುಷ್ಯ ಸತ್ತ ಮೇಲೆ ಯಾವುದಕ್ಕೂ ಉಪಯೋಗಕ್ಕೆ ಬರುವುದಿಲ್ಲ. ಹಾಗಾಗಿ ಈ ಮಣ್ಣದಲ್ಲಿ ದೇಹ ಮಣ್ಣಾಗುವ ಬದಲು ಉಪಯೋಗವಾಗಲಿ ಎಂದಿದ್ದಾರೆ. ಈ ಕಾರಣಕ್ಕಾಗಿಯೇ ಅವರು ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ.
ಸಾಮಾನ್ಯವಾಗಿ ಕಣ್ಣು ದಾನ ಮಾಡಿರುವುದನ್ನು ಕೇಳಿದ್ದೇವೆ. ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವರು ಕಣ್ಣು ದಾನ ಮಾಡುವುದರ ಮೂಲಕ ಜಗತ್ತಿಗೆ ಮಾದರಿಯ ನಡೆಯನ್ನು ಹಾಕಿಕೊಟ್ಟಿದ್ದಾರೆ. ಸಂಚಾರಿ ವಿಜಯ್ ಅವರ ಕುಟುಂಬ ವಿಜಯ್ ಅವರ ಅಂಗಾಂಗ ದಾನ ಮಾಡುವ ಮೂಲಕ ಮಾದರಿ ಆಯಿತು. ಇದೀಗ ವಿಜಯ್ ದೇವರಕೊಂಡ ಕೂಡ ಅಂಗಾಂಗ ದಾನ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ʻ24X7 ಸಹಾಯವಾಣಿʼ ಆರಂಭ : ಸಚಿವ ಸುಧಾಕರ್ – Vishwanews24
ತಮಗೆ ಇಂಥದ್ದೊಂದು ಯೋಚನೆ ಬಂದಿದ್ದು ವೈದ್ಯ ವಿದ್ಯಾರ್ಥಿಗಳನ್ನು ನೋಡಿದಾಗ ಮತ್ತು ಅವರೊಂದಿಗೆ ಮಾತನಾಡಿದಾಗ ಎಂದು ವಿಜಯ್ ತಿಳಿಸಿದ್ದಾರೆ. ಅಂಗಾಂಗ ದಾನ ಮಾಡುವಂತಹ ಅಪರೂಪದ ನಡೆಗೆ ವಿಜಯ್ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ. ಇದು ಇತರರಿಗೂ ಮಾದರಿ ಆಗಲಿ ಎಂದು ಅಭಿಮಾನಿಗಳು ವಿಜಯ್ ನಡೆಯನ್ನು ಪ್ರಶಂಸಿಸಿದಿದ್ದಾರೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…