ಬೆಂಗಳೂರು: ಮತಗಳ್ಳತನ ಆರೋಪ ಮಾಡಿರುವ ರಾಹುಲ್ ಗಾಂಧಿಗೆ ಧ್ವನಿಗೂಡಿಸಿರುವ ಸಿಎಂ, ಡಿಸಿಎಂ ರಾಜ್ಯದ ಜನರ ಕ್ಷಮೆ ಕೇಳಬೇಕು ಅಂತಾ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರ ಎನ್ನುವಂತೆ ಆಗಿದೆ ಕಾಂಗ್ರೆಸ್ ಸ್ಥಿತಿ. ಸೋಲಿನ ಹತಾಶೆಯಿಂದ ರಾಹುಲ್ ಗಾಂಧಿ ಚುನಾವಣಾ ಆಯೋಗದ ಬಗ್ಗೆ ಮಾತಾಡ್ತಾ ಇದ್ದಾರೆ. ಕರ್ನಾಟಕ ಚುನಾವಣೆಯಲ್ಲಿ ಅಕ್ರಮ ಆಗಿದೆ ಎಂದು ಹೇಳಿದ್ದಾರೆ. ಅದಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಕೂಡ ಧ್ವನಿಗೂಡಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯ, ಡಿಕೆಶಿ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ನಾಯಕರ ತುರ್ತು ಪರಿಸ್ಥಿತಿ ಮೈಂಡ್ ಸೆಟ್ ಬದಲಾಗಿಲ್ಲ. ಇದು ಅಪಾಯಕಾರಿ ಯೋಚನೆ. ಚುನಾವಣೆ ಅಕ್ರಮ ಲೋಕಸಭಾ ಚುನಾವಣೆಯಲ್ಲಿ ಆಗಿದ್ದರೆ,ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೇಗೆ ಗೆಲ್ಲುತ್ತಿತ್ತು? ಸಿದ್ದರಾಮಯ್ಯ ಹೇಗೆ ಸಿಎಂ ಆದ್ರು? ಬೈ ಎಲೆಕ್ಷನ್‌ಲ್ಲಿ ಹೇಗೆ ಗೆದ್ರು? ಎಂದು ಪ್ರಶ್ನಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…