ಮತದಾರರು ಧರ್ಮದ ಹೆಸರಿನಲ್ಲಿ ಒಡೆದು ಆಳುವವರನ್ನು ದೂರವಿಟ್ಟಿದ್ದಾರೆ : ಮಲ್ಲಿಕಾರ್ಜುನ ಖರ್ಗೆ -Vishwanews24

ಬೆಳಗಾವಿ: “ದೆಹಲಿಯ ಮತದಾರರು ಧರ್ಮದ ಹೆಸರಿನಲ್ಲಿ ಒಡೆದು ಆಳುವವರನ್ನು ದೂರವಿಟ್ಟಿದ್ದಾರೆ. ಅವರ ತತ್ವ-ಸಿದ್ದಾಂತಗಳಿಗೆ ಮನ್ನಣೆ ದೊರಕಿಲ್ಲ” ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಗುರುವಾರ ಬೆಳಗಾವಿ ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ನಾಯಕರು, ಕೇಂದ್ರದ ಹತ್ತಾರು ಸಚಿವರು ನಾವೇ ಗೆಲ್ಲುತ್ತೇವೆ ಎಂದು ನಡೆಸಿದ್ದ ಪ್ರಚಾರ ಯಶಸ್ವಿಯಾಗಿಲ್ಲ. ಕಾಂಗ್ರೆಸ್‌‌ ಪಕ್ಷವೂ ಚುನಾವಣೆಯಲ್ಲಿ ಭಾಗವಹಿಸಿತ್ತು. ಆದರೆ ಯಶಸ್ಸು ಸಿಕ್ಕಿಲ್ಲ. ಸೋಲು-ಗೆಲುವು ಸಾಮಾನ್ಯ. ನಮ್ಮ ಪಕ್ಷದ ನ್ಯೂನ್ಯತೆ ಹಾಗೂ ಕೊರತೆಗಳನ್ನು ಚರ್ಚಿಸಿ ಸರಿಪಡಿಸುವ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.

“ಯುವಕರಿಗೆ 2 ಕೋಟಿ ಉದ್ಯೋಗ ನೀಡುತ್ತೇನೆ, ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗೆ 15 ಲಕ್ಷ ಹಾಕುತ್ತೇನೆ, ಅಚ್ಛೇ ದಿನ್‌ ಬರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಭಾವನಾತ್ಮಕವಾಗಿ ಸೆಳೆದು, ಎರಡು ಬಾರಿ ಪ್ರಧಾನಿಯಾಗಲಿಲ್ಲವೇ. ಚುನಾವಣೆಯಲ್ಲಿ ಕೇವಲ ಅಭಿವೃದ್ಧಿ ವಿಷಯವೊಂದೇ ಮುಖ್ಯವಾಗಲ್ಲ. ಭಾವನಾತ್ಮಕ ವಿಷಯವೂ ಪರಿಣಾಮ ಬೀರುತ್ತದೆ” ಎಂದು ಹೇಳಿದರು.

“ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಮಹಾತ್ಮ ಗಾಂಧಿ ಅವರ ಜೊತೆ ಚರ್ಚಿಸಿ, ಪೂನಾ ಒಪ್ಪಂದದ ಭಾಗವಾಗಿ ಮೀಸಲಾತಿಯನ್ನು ನೀಡಿದ್ದಾರೆ. ಸಂವಿಧಾನದ 16ನೇ ವಿಧಿಯಲ್ಲಿ ಮೀಸಲಾತಿ ಕಲ್ಪಿಸಿದ್ದಾರೆ. ಆದರೆ, ಉತ್ತರಾಖಂಡ ಪ್ರಕರಣದಲ್ಲಿ ಇದನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ ಎಂದು ತಿಳಿಸಿದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago