Featured

ಮತದಾರರ ಕೈಗೆ ಚಪ್ಪಲಿ ಕೊಟ್ಟು ಕೆಲಸ ಮಾಡದಿದ್ದರೆ ಇದರಿಂದ ಹೊಡೆಯಿರಿ ಎಂದ ಅಭ್ಯರ್ಥಿ (ವಿಡಿಯೋ)

ಹೈದರಾಬಾದ್: ತೆಲಂಗಾಣದಲ್ಲಿ ಓರ್ವ ಅಭ್ಯರ್ಥಿ ಮತದಾರರ ಕೈಗೆ ಚಪ್ಪಲಿ ಕೊಟ್ಟ ಕೆಲಸ ಮಾಡದಿದ್ದರೆ ಇದರಿಂದಲೇ ನನ್ನನ್ನು ಹೊಡೆಯಿರಿ ಎಂದು ಹೇಳುವ ಮೂಲಕ ವಿನೂತನ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಮತದಾನದ ದಿನಾಂಕ ಹತ್ತಿರಾವಾಗುತ್ತಿದ್ದಂತೆಯೇ ಮತದಾರರ ಸೆಳೆಯಲು ಅಭ್ಯರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯೊಬ್ಬರು ಮತ ಕೇಳುತ್ತಿರುವ ರೀತಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಮತದಾರರ ಕೈಗೆ ಚಪ್ಪಲಿ ಕೊಟ್ಟು ಅಭ್ಯರ್ಥಿ ಮತ ಕೇಳುವ ಮೂಲಕ ಇದೀಗ ಸುದ್ದಿಯಾಗಿದ್ದಾರೆ.

ಟಿಆರ್​ಎಸ್​ ಸೀನಿಯರ್​ ಲೀಡರ್​ ವಿದ್ಯಾಸಾಗರ್​ ರಾವ್ ಗೆ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿದಿರುವ ಅಕುಲ ಹನುಮಂತ ಎಂಬವರು ಮೆಟ್ಟುಪಲ್ಲಿಯಲ್ಲಿ ಮನೆಮನೆ ಪ್ರಚಾರದಲ್ಲಿ ತೊಡಗಿದ್ದ ವೇಳೆ, ಅಲ್ಲಿನ ಗ್ರಾಮಸ್ಥರ ಕೈಗೆ ಚಪ್ಪಲಿ ಕೊಟ್ಟು ಕೈ ಮುಗಿದು ವೋಟ್​ ಕೇಳುತ್ತಿದ್ದಾರೆ. ಹಾಗಂತ ಅವರ ಚಿಹ್ನೆ ಚಪ್ಪಲಿಯಲ್ಲ. ಬದಲಾಗಿ, ಚಪ್ಪಲಿ ಮೂಲಕ ಜನರಿಗೆ ಆಶ್ವಾಸನೆ ನೀಡುತ್ತಿರುವ ಅವರು ತಾವು ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಲು ಸಾಧ್ಯವಾಗದಿದ್ದಲ್ಲಿ ಇದೇ ಚಪ್ಪಲಿಯಲ್ಲಿ ತಮಗೆ ಹೊಡೆಯಿರಿ ಎಂದು ಪ್ರಚಾರ ಮಾಡುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಕಳೆದ ಕೆಲ ದಶಕಗಳಿಂದಲೂ ಇಲ್ಲಿ ಟಿಆರ್ ಎಸ್ ಪ್ರಭಾವವಿದೆ. ಆದರೆ ಗೆದ್ದ ಅಭ್ಯರ್ಥಿಗಳಿಂದ ಇಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಹೀಗಾಗಿ ಈ ಬಾರಿ ಖುದ್ಧು ತಾವೇ ನಿಂತಿದ್ದು, ಜನರ ವಿಶ್ವಾಸ ಗಳಿಸಲು ಯತ್ನಿಸುತ್ತಿದ್ದೇನೆ. ಹೀಗಾದರೂ ಜನರು ತಮ್ಮ ಮೇಲೆ ನಂಬಿಕೆ ಇಟ್ಟು ಗೆಲ್ಲಿಸಲಿ ಎಂಬುದು ನನ್ನ ಉದ್ದೇಶ ಎಂದು ಹೇಳಿಕೊಂಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago