ಹೈದರಾಬಾದ್: ತೆಲಂಗಾಣದಲ್ಲಿ ಓರ್ವ ಅಭ್ಯರ್ಥಿ ಮತದಾರರ ಕೈಗೆ ಚಪ್ಪಲಿ ಕೊಟ್ಟ ಕೆಲಸ ಮಾಡದಿದ್ದರೆ ಇದರಿಂದಲೇ ನನ್ನನ್ನು ಹೊಡೆಯಿರಿ ಎಂದು ಹೇಳುವ ಮೂಲಕ ವಿನೂತನ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.
ತೆಲಂಗಾಣ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಮತದಾನದ ದಿನಾಂಕ ಹತ್ತಿರಾವಾಗುತ್ತಿದ್ದಂತೆಯೇ ಮತದಾರರ ಸೆಳೆಯಲು ಅಭ್ಯರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯೊಬ್ಬರು ಮತ ಕೇಳುತ್ತಿರುವ ರೀತಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಮತದಾರರ ಕೈಗೆ ಚಪ್ಪಲಿ ಕೊಟ್ಟು ಅಭ್ಯರ್ಥಿ ಮತ ಕೇಳುವ ಮೂಲಕ ಇದೀಗ ಸುದ್ದಿಯಾಗಿದ್ದಾರೆ.
ಟಿಆರ್ಎಸ್ ಸೀನಿಯರ್ ಲೀಡರ್ ವಿದ್ಯಾಸಾಗರ್ ರಾವ್ ಗೆ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿದಿರುವ ಅಕುಲ ಹನುಮಂತ ಎಂಬವರು ಮೆಟ್ಟುಪಲ್ಲಿಯಲ್ಲಿ ಮನೆಮನೆ ಪ್ರಚಾರದಲ್ಲಿ ತೊಡಗಿದ್ದ ವೇಳೆ, ಅಲ್ಲಿನ ಗ್ರಾಮಸ್ಥರ ಕೈಗೆ ಚಪ್ಪಲಿ ಕೊಟ್ಟು ಕೈ ಮುಗಿದು ವೋಟ್ ಕೇಳುತ್ತಿದ್ದಾರೆ. ಹಾಗಂತ ಅವರ ಚಿಹ್ನೆ ಚಪ್ಪಲಿಯಲ್ಲ. ಬದಲಾಗಿ, ಚಪ್ಪಲಿ ಮೂಲಕ ಜನರಿಗೆ ಆಶ್ವಾಸನೆ ನೀಡುತ್ತಿರುವ ಅವರು ತಾವು ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಲು ಸಾಧ್ಯವಾಗದಿದ್ದಲ್ಲಿ ಇದೇ ಚಪ್ಪಲಿಯಲ್ಲಿ ತಮಗೆ ಹೊಡೆಯಿರಿ ಎಂದು ಪ್ರಚಾರ ಮಾಡುತ್ತಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಕಳೆದ ಕೆಲ ದಶಕಗಳಿಂದಲೂ ಇಲ್ಲಿ ಟಿಆರ್ ಎಸ್ ಪ್ರಭಾವವಿದೆ. ಆದರೆ ಗೆದ್ದ ಅಭ್ಯರ್ಥಿಗಳಿಂದ ಇಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಹೀಗಾಗಿ ಈ ಬಾರಿ ಖುದ್ಧು ತಾವೇ ನಿಂತಿದ್ದು, ಜನರ ವಿಶ್ವಾಸ ಗಳಿಸಲು ಯತ್ನಿಸುತ್ತಿದ್ದೇನೆ. ಹೀಗಾದರೂ ಜನರು ತಮ್ಮ ಮೇಲೆ ನಂಬಿಕೆ ಇಟ್ಟು ಗೆಲ್ಲಿಸಲಿ ಎಂಬುದು ನನ್ನ ಉದ್ದೇಶ ಎಂದು ಹೇಳಿಕೊಂಡಿದ್ದಾರೆ.
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…