ಉಡುಪಿ

ಮತದಾರರ ತೀರ್ಪು ಬಿಜೆಪಿ ಪರ : ಲಾಲಾಜಿ

ಕಾಪು: ಕೇಂದ್ರದಲ್ಲಿ ಆಡಳಿತದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಜನಪ್ರಿಯತೆ ಮತ್ತು ರಾಜ್ಯದಲ್ಲಿ ಆಡಳಿತದಲ್ಲಿರುವ ಸಿದ್ಧರಾಮಯ್ಯ ಸರಕಾರದ ವೈಫಲ್ಯ ಎರಡನ್ನೂ ಜನ ತುಲನೆ ಮಾಡಿ ಮತಚಲಾಯಿಸಲಿದ್ದಾರೆ. ಮತದಾರರ ತೀರ್ಪು ಬಿಜೆಪಿಗೆ ಪರವಾಗಿ ಇರಲಿದ್ದು, ಈ ಬಾರಿ ಬಿಜೆಪಿಯ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

ಕಾಪು ಕ್ಷೇತ್ರ ಬಿಜೆಪಿಯ ಮಹಿಳಾ ಜನಪ್ರತಿನಿಧಿಗಳು ಪ್ರಾರಂಭಿಸಿರುವ ಮನೆ ಮನೆ ಭೇಟಿ ಮತ್ತು ಮನೆ ಮನೆ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಜನಪ್ರತಿನಿಧಿಗಳೇ ಹೆಚ್ಚಾಗಿರುವುದೂ ನಮಗೆ ಲಾಭವಾಗಲಿದೆ. ಬಿಜೆಪಿಯಲ್ಲಿ ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗಿದೆ. ಇದುವೇ ಬಿಜೆಪಿಗೆ ವರದಾನವಾಗಲಿದೆ ಎಂದರು.

ಕಾಪು ಕ್ಷೇತ್ರದಲ್ಲಿ ಈ ಹಿಂದೆ ನಾನು ಶಾಸಕನಾಗಿದ್ದಾಗ ಜನರೊಂದಿಗೆ ಇರಿಸಿದ್ದ ಸಂಪರ್ಕವನ್ನೇ ಮತ್ತೆ ಮುಂದುವರಿಸಿಕೊಂಡು ಬರಲಾಗುತ್ತಿದೆ. ಅಂದಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಈಗಲೂ ನೆನಪಿಸಿಕೊಳ್ಳುತ್ತಿದ್ದಾರೆ. ಅದನ್ನೇ ಮತವಾಗಿ ಪರಿವರ್ತಿಸುವ ಕೆಲಸ ಮಹಿಳಾ ಜನಪ್ರತಿನಿಧಿಗಳಿಂದ ನಡೆಯಬೇಕಿದೆ ಎಂದರು.

ಉಡುಪಿ ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಾ.ಪಂ. ಸದಸ್ಯರಾದ ಶಶಿಪ್ರಭಾ ಶೇಟ್ಟಿ, ನೀತಾ ಗುರುರಾಜ್‌, ಎಲ್ಲೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್‌, ಕಟಪಾಡಿ ಗ್ರಾ.ಪಂ. ಸದಸ್ಯೆ ವೀಣಾ ಶೆಟ್ಟಿ, ಪುರಸಭಾ ಸದಸ್ಯೆ ಮೋಹಿನಿ ಶೆಟ್ಟಿ  ಉಪಸ್ಥಿತರಿದ್ದರು.

Vishwa News 24

Recent Posts

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

2 hours ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

2 hours ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

2 hours ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

2 hours ago

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು – vishwanews24

ಪಿಕಲ್‌ಬಾಲ್‌ ಆಟಗಾರರು ಪ್ರಯಾಣಿಸುತ್ತಿದ್ದ ವಿಮಾನ ಟೆಕ್ಸಾಸ್‌ನಲ್ಲಿ ಪತನ :  ಐವರು ಮೃತ್ಯು ಆಸ್ಟಿನ್: ವಿಂಬರ್ಲಿ ಬಳಿ ಪಿಕಲ್‌ಬಾಲ್ ಆಟಗಾರರನ್ನು ಹೊತ್ತೊಯ್ಯುತ್ತಿದ್ದ…

4 hours ago

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ – vishwanews24

ನಟ ಡಾಲಿ ಧನಂಜಯ್ ಧನ್ಯತಾ ದಂಪತಿಗೆ ಗಂಡು ಮಗು ಜನನ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಹಾಗೂ ಧನ್ಯತಾ ದಂಪತಿಗೆ…

4 hours ago