ರಾಜ್ಯ ನ್ಯೂಸ್

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ಬದಲಾವಣೆ ಮಾಡಲು ಏ.14 ಕೊನೆಯ ದಿನ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ನಿಗದಿಯಾಗಿದ್ದು ಮೇ 12ರಂದು ನಡೆಯಲಿದೆ. ಆದರೂ ಬಹಳಷ್ಟು ಜನರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಸಾಧ್ಯವಾಗದೆ ನಿರಾಶರಾಗಿದ್ದರೆ, ಅವರಿಗೆ ಚುನಾವಣಾ ಆಯೋಗ ಮತ್ತೊಂದು ಅವಕಾಶ ನೀಡಿದೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರಿಸಲು ಮತ್ತು ಬದಲಾವಣೆ ಮಾಡಲು ಏ.14ರವರೆಗೆ ಕಾಲಾವಕಾಶ ನೀಡಲಾಗಿದೆ. 

ಈ ಬಗ್ಗೆ ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ಅವರು ಮಾಹಿತಿ ನೀಡಿದ್ದು, ಏ.8ರಂದು ‘ಮಿಂಚಿನ ನೋಂದಣಿ’ ಹೆಸರಲ್ಲಿ ನೋಂದಣಿ ಮತ್ತು ತಿದ್ದುಪಡಿಗಾಗಿ ವಿಶೇಷ ಕಾರ್ಯಕ್ರಮವನ್ನು ಚುನಾವಣಾ ಆಯೋಗ ಹಮ್ಮಿಕೊಂಡಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮತ್ತು ತಿದ್ದುಪಡಿಗಳನ್ನು ಮಾಡಲು ಇಚ್ಚಿಸುವವರು ಏ.8 ರಂದು ಆಯಾ ವ್ಯಾಪ್ತಿಯ ಮತ ಕೇಂದ್ರಗಳಿಗೆ ತೆರಳಿ ತಿದ್ದುಪಡಿ ಮಾಡಿಕೊಳ್ಳಬಹುದು. ಈ ಪ್ರಕ್ರಿಯೆ ಎಲ್ಲಾ ಮತ ಕೇಂದ್ರಗಳಲ್ಲಿ ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ ಎಂದಿದ್ದಾರೆ. 

ಮತದಾರರ ಪಟ್ಟಿಯಲ್ಲಿ ನೂತನವಾಗಿ ಹೆಸರು ಸೇರಿಸಲು, ಸ್ಥಳ ಬದಲಾವಣೆ ಬಗ್ಗೆ ಮಾಹಿತಿ ನೀಡಲು ಮತ್ತು ಹೆಸರು ಕಣ್ಮರೆ ಆಗಿದ್ದರೆ ಪುನಃ ಸೇರಿಸಲು ಫಾರಂ 6 ಅನ್ನು, ಪಟ್ಟಿಯಿಂದ ಹೆಸರು ತೆಗೆಸಲು ಫಾರಂ 7, ಮತದಾರರ ಪಟ್ಟಿಯ ತಪ್ಪುಗಳನ್ನು ಬದಲಿಸಲು ಫಾರಂ 8 ಮತ್ತು ಒಂದೇ ಚುನಾವಣಾ ಕ್ಷೇತ್ರದಲ್ಲಿ ಮತದಾರರ ಹೆಸರನ್ನು ಇನ್ನೊಂದು ಜಾಗಕ್ಕೆ ಸ್ಥಳಾಂತರಿಸಲು ಅಂದರೆ ನಿಮ್ಮ ವಿಳಾಸ ಬದಲಾಗಿದ್ದರೆ ಫಾರಂ 8ಎ ಬಳಸಿ ಅರ್ಜಿ ಸಲ್ಲಿಸಬಹುದು. ಮತದಾರರು ಆನ್’ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago