Featured

ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ: ಡಿ.ಕೆ ಶಿ ಗೆ ಕೆ. ವಿರುದ್ಧ ಎಸ್ ಈಶ್ವರಪ್ಪ ವಾಗ್ದಾಳಿ – Vishwanews24

ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ: ಡಿ.ಕೆ ಶಿ ಗೆ ಕೆ. ವಿರುದ್ಧ ಎಸ್ ಈಶ್ವರಪ್ಪ ವಾಗ್ದಾಳಿ – Vishwanews24

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಕನ್ನಡ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸೆ, ಆಮಿಷ, ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡಬಾರದು. ಕಾನೂನು ಪ್ರಕಾರ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಹೋಗಬಹುದು. ಕದ್ದುಮುಚ್ಚು ಮತಾಂತರ ಆಗುವಂತಿಲ್ಲ ಎಂದರು.

ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ 2 ತಿಂಗಳ ಬಳಿಕ ಮತಾಂತರ ಆಗಬಹುದು. ಆ ಅವಧಿಯಲ್ಲಿ ಬೇಡವೆನಿಸಿದರೆ ಅರ್ಜಿ ವಾಪಸ್ ಪಡೆಯಬಹುದು. ಕಾಂಗ್ರೆಸ್, ಜೆಡಿಎಸ್ ನವರು ಇದಕ್ಕೆ ಯಾಕೆ ವಿರೋಧ ಮಾಡ್ತಾರೋ ಗೊತ್ತಿಲ್ಲ. ಡಿ.ಕೆ ಶಿವಕುಮಾರ್ ಅವರಿಗೆ ಮತಾಂತರ ಆದ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ ಎಂದು ತಿಳಿಸಿದರು.

ಮತಾಂತರ ಮಾಡಿ ವಿದೇಶಗಳಿಗೆ ಮಾರಾಟ ಮಾಡಿದ್ದಾರೆ. ಅವರ ದೇಹ ಉಪಯೋಗಿಸಿಕೊಂಡ ಕೈಬಿಟ್ಟ ಉದಾಹರಣೆಗಳು ಸಾಕಷ್ಟಿವೆ. ಡಿಕೆಶಿ ಅವರಿಗೆ ಇವುಗಳನ್ನ ತೋರಿಸುತ್ತೇನೆ. ನಿನ್ನೆ ರಾಜಕಾರಣ ಮಾಡಿ ಸಭಾತ್ಯಾಗ ಮಾಡಿದ್ದಾರೆ. ರಾಜ್ಯದ ಜನ ಇದನ್ನ ಗಮನಿಸಿದ್ದಾರೆ. ಕಾನೂನು ಬದ್ಧವಾಗಿ ಮತಾಂತರ ನಿಷೇಧ ಕಾಯಿದೆಯನ್ನ ಜಾರಿಗೆ ತರುತ್ತೇವೆ ಎಂದು ಸಚಿವರು ಹೇಳಿದರು.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

1 hour ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

22 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

22 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

22 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago