ಮುಲ್ಕಿ: ಮತಾಂತರದ ವಿರುದ್ಧ ಜನಜಾಗೃತಿ ಮೂಡಿಸಲು ಪರಿಷತ್ ನೇತೃತ್ವದಲ್ಲಿ 26ರಂದು ಮುಲ್ಕಿಯಲ್ಲಿ ಜನಜಾಗೃತಿ ಜನಾಂದೋಲನ ನಡೆಯಲಿದೆ ಎಂದು ವಿಶ್ವಹಿಂದೂ ಪರಿಷತ್ತಿನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್ ತಿಳಿಸಿದ್ದಾರೆ.
ಮೂಲ್ಕಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರಾವಳಿಯ ಹಲವು ಕಡೆಗಳಲ್ಲಿ ಪ್ರಾರ್ಥನಾಮಂದಿರದ ಮುಖಾಂತರ ಕ್ರಿಶ್ಚಿಯನ್ ಮಿಷನರಿಗಳು ಹಿಂದೂಗಳನ್ನು ಮತಾಂತರ ಮಾಡಲು ತೊಡಗಿದೆ. ಮುಲ್ಕಿಯ ಡಿವೈನ್ ಕಾಲ್ ಸೆಂಟರ್ ನ ಪ್ರಾರ್ಥನಾ ಮಂದಿರದ ಮೇಲೆ ಪ್ರಕರಣ ದಾಖಲಾಗಿದೆ. ಈ ಪ್ರಾರ್ಥನಾ ಮಂದಿರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಜಿಲ್ಲಾಧಿಕಾರಿ ಸಹಿತ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ದೂರು ನೀಡಲಾಗಿದ್ದು ಯಾವುದೇ ಕ್ರಮ ಕೈಗೊಳ್ಳದ ಕಾರಣ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.
ನಮ್ಮ ಹೋರಾಟ ಕ್ರಿಶ್ಚಿಯನ್ ಸಮುದಾಯದ ವಿರುದ್ಧ ಅಲ್ಲ. ಬದಲಾಗಿ ನಾವು ವಿರೋಧಿಸುತ್ತಿರುವುದು ಹಿಂದೂಗಳನ್ನು ಮತಾಂತರ ಮಾಡುವ ವ್ಯಕ್ತಿಗಳು ಮತ್ತು ಅವರ ಸಂಸ್ಥೆಗಳ ವಿರುದ್ಧ ಮಾತ್ರ. ನಾವು ಕ್ರೈಸ್ತ ಸಮುದಾಯಕ್ಕೆ ಗೌರವ ಕೊಡುತ್ತೇವೆ. ಧರ್ಮ ಪ್ರಚಾರದ ಹೆಸರಿನಲ್ಲಿ ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತರುವ ಕೆಲಸ ಮಾಡುತ್ತಿದೆ . ಇದರ ವಿರುದ್ಧ ನಮ್ಮ ಹೋರಾಟ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಂಗಳೂರಿನ ವಿಶ್ವಹಿಂದೂ ಪರಿಷತ್ ನ ಅಧ್ಯಕ್ಷ ಗೋಪಾಲ್ ಕುತ್ತಾರ್ ವಿಶ್ವ ಹಿಂದೂ ಪರಿಷತ್ತಿನ ಕಾರ್ಯದರ್ಶಿ ಸಂತೋಷ್ ಮಂಗಳೂರು ಬಜರಂಗದಳದ ವಿಭಾಗ ಸಂಚಾಲಕ ಭುಜಂಗ ಕುಲಾಲ್ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಪ್ರಮೋದ್ ಶೆಟ್ಟಿ ಭಾಗವಹಿಸಿದ್ದರು.
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…