ಮತಾಂತರ ತಡೆ ಕಾಯ್ದೆಯಲ್ಲೇ ಲವ್ ಜಿಹಾದ್ ತಡೆಯುವ ಅಂಶಗಳು ಸೇರಿವೆ , ಪ್ರತ್ಯೇಕ ಕಾನೂನು ಅಗತ್ಯ ಇಲ್ಲ:  ಆರಗ ಜ್ಞಾನೇಂದ್ರ – Vishwanews24

Featured, ರಾಜ್ಯ ನ್ಯೂಸ್

‘ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ:  ಆರಗ ಜ್ಞಾನೇಂದ್ರ

ಚಿತ್ರದುರ್ಗ : ಮತಾಂತರ ತಡೆ ಕಾಯ್ದೆಯಲ್ಲೇ ಲವ್ ಜಿಹಾದ್ ತಡೆಯುವ ಅಂಶಗಳು ಸೇರಿವೆ. ಹೀಗಾಗಿ ಪ್ರತ್ಯೇಕ ಕಾನೂನು ಅಗತ್ಯ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಂಘ ಪರಿವಾರದ ಕೆಲ ಸಂಘಟನೆಗಳು ಲವ್ ಜಿಹಾದ್ ತಡೆಗೆ ಹೊಸ ಕಾನೂನು ರೂಪಿಸಲು ಒತ್ತಾಯಿಸುತ್ತಿರುವ ಕುರಿತು ಬುಧವಾರ ಪ್ರತಿಕ್ರಿಯಿಸಿದ ಸಚಿವರು, ‘ಲವ್ ಜಿಹಾದ್ ತಡೆಗೆ ರಾಜ್ಯದಲ್ಲಿ ಪ್ರತ್ಯೇಕ ಕಾನೂನು ರೂಪಿಸುವ ಹಾಗೂ ವಿಶೇಷ ಕಾರ್ಯಪಡೆ ರಚಿಸುವ ಅಗತ್ಯ ಇಲ್ಲ’ ಎಂದು ಹೇಳಿದ್ದಾರೆ.

”ರಾಜ್ಯದಲ್ಲಿ ಜಾರಿಯಲ್ಲಿರುವ ಮತಾಂತರ ನಿಷೇಧ ಕಾಯ್ದೆಯಲ್ಲಿ ಈ ಅಂಶ ಅಡಕವಾಗಿದೆ. ಹೀಗಾಗಿ, ಪ್ರತ್ಯೇಕ ಕಾನೂನು ಅಥವಾ ಕಾರ್ಯಪಡೆಯ ಅಗತ್ಯ ಬರುವುದಿಲ್ಲ. ಆದರೂ, ಈ ವಿಚಾರದಲ್ಲಿ ಪರಿಶೀಲನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ನನಗೊಮ್ಮೆ ಕಾರ್ಕಳದಲ್ಲಿ ಶಾಸಕನಾಗುವ ಅವಕಾಶ ಕೊಟ್ಟು ನೋಡಿ, ಹಿಂದುತ್ವ ಎಂದರೇನೆಂದು ಸಾಬೀತು ಮಾಡಿ ತೋರಿಸುತ್ತೇನೆ  : ಪ್ರಮೋದ್‌ ಮುತಾಲಿಕ್‌  – Vishwanews24

Leave a Reply