ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವಾಗಿದ್ದು ರಾಜ್ಯದ ಬಿಜೆಪಿ ಜಾರಿಗೊಳಿಸಲು ಹೊರಟಿರುವ ಮತಾಂತರ ನಿಷೇಧಕಾಯ್ದೆ ಸುಗ್ರೀವಾಜ್ಞೆ ತಿರಸ್ಕರಿಸಬೇಕೆಂದು ರಾಜ್ಯಪಾಲರಿಗೆ ವಿಪಕ್ಷ ಮುಖಂಡ ಸಿದ್ದರಾಮಯ್ಯ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ” ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸಿ ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ.
ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ? ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ, ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದು ಬಾಂಧವರೆಲ್ಲರೂ ಖಂಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತು ಅವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್ ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ತರಾತುರಿಯ ಮತಾಂತರ ನಿಷೇಧ ಕಾಯ್ದೆ ಇಂತಹ ದಾಳಿಗೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವೇ ಬೊಮ್ಮಾಯಿಯವರೇ? ಸ್ವಯೀಚ್ಛೆಯಿಂದ ಮತಾಂತರಗೊಳ್ಳುವ ಹಕ್ಕು ಸಂವಿಧಾನವೇ ನೀಡಿದೆ. ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಸರ್ಕಾರಕ್ಕೆ ನಂಬಿಕೆ ಇಲ್ಲವೇ? ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆಯ ದುರುಪಯೋಗವನ್ನು ತಡೆಯಲು ಕಾಂಗ್ರೆಸ್ ಪಕ್ಷ ಖಂಡಿತ ಅವಕಾಶ ನೀಡುವುದಿಲ್ಲ. ಅನ್ಯಾಯ – ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಬಂಧುವಿನ ಜೊತೆ ನಮ್ಮ ಪಕ್ಷ ನಿಲ್ಲಲಿದ್ದು ಈ ಕಾಯ್ದೆಯ ವಿರುದ್ಧ ನಮ್ಮ ಪಕ್ಷ ಜನಾಂದೋಲನ ನಡೆಸಲಿದೆ ಎಂದು ಕರೆ ನೀಡಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…