ಬೆಂಗಳೂರು: ಮಂಡನೆ ವಿಚಾರವು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಂಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಅಶಾಂತಿ ಮೂಡಿಸುವ ಜೊತೆಗೆ ರಾಜಕೀಯವಾಗಿ ಕೆಲ ವಿಷಯಗಳನ್ನು ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರು ಮಾಡಿದ ಸಂವಿಧಾನಕ್ಕೆ ಈ ತೀರ್ಮಾನ ಅನ್ವಯಿಸುವುದಿಲ್ಲ. ಅಂಬೇಡ್ಕರ್ ಅವರು ನಂತರದಲ್ಲಿ ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದರು ಎಂದರು.
ಬೇರೆ ಬೇರೆಯವರು ಬಂದು ಹರೇ ರಾಮ ಹರೇ ಕೃಷ್ಣಾ ಎಂದು ನಮ್ಮ ರಾಜ್ಯದಲ್ಲಿ ಭಜನೆ ಮಾಡುತ್ತಾರೆ. ಇದೊಂದು ಸೆಕ್ಯೂಲರ್ ರಾಜ್ಯವಾಗಿದೆ. ಶಾಂತಿಯ ನೆಲವೀಡಾದ ಕರ್ನಾಟಕದ ಬಗ್ಗೆ ಅಪಾರವಾದ ಪ್ರೀತಿ ಇದೆ. ಕರ್ನಾಟಕದಲ್ಲಿ ಶಾಂತಿ ಕೆಡೆಸಲು ಇದೊಂದು ಪ್ರಯತ್ನವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇಂದು ಎಲ್ಲರಿಗೂ ಸೆಂಟ್ ಜೋಸೆಫ್, ಸೆಂಟ್ ಮಾರ್ಥಸ್‌ನಂತಹ ಕ್ರೈಸ್ತ ಶಾಲೆ ಬೇಕು. ನಾನು ನಮ್ಮ ಹಳ್ಳಿಯಲ್ಲಿ ಕ್ರೈಸ್ತ್ ಸ್ಕೂಲ್ ನಲ್ಲಿ ಓದಿದೆ. ನನಗೆ ಅಲ್ಲಿ ಯಾವತ್ತೂ ಅವರ ಧರ್ಮದ ಬಗ್ಗೆ ಭೋದಿಸಿಲ್ಲ. ಎಲ್ಲಾದರೂ ಅವರು ಬಲವಂತ ಮಾಡಿರುವ ಉದಾಹರಣೆಯೂ ಇಲ್ಲ. ಸುಮ್ಮನೆ ಮಾನಸಿಕವಾಗಿ ಅವರಿಗೆ ಹಿಂಸೆ ಕೊಡುವ ಕೆಲಸ ಆಗುತ್ತಿದೆ. ಇದು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಟೀಕಿಸಿದರು.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…