Featured

ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ ,  ಇದು ನನ್ನ ಹಕ್ಕು : ಡಿಕೆ ಶಿ – Vishwanews24

ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ ,  ಇದು ನನ್ನ ಹಕ್ಕು : ಡಿಕೆ ಶಿ

ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ಸರ್ಕಾರ ಕಳ್ಳರಂತೆ ವರ್ತಿಸುತ್ತಿದೆ..

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಈ ಮಸೂದೆಯನ್ನು ಹಿಂಪಡೆಯಲಿದೆ..

ಬೆಳಗಾವಿ: ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ. ಇದು ನನ್ನ ಹಕ್ಕು. ಅವರು ಏನು ಮಾಡುತ್ತಾರೋ ಮಾಡಲಿ. ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ಸರ್ಕಾರ ಕಳ್ಳರಂತೆ ವರ್ತಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ನಂತರ ಡಿ.ಕೆ. ಶಿವಕುಮಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸದನದಲ್ಲಿ ಸಮಯಾವಕಾಶ ಇದ್ದರೂ ಕಾಯಲಿಲ್ಲ. ಕಂದಾಯ ಸಚಿವರು ಉತ್ತರ ನೀಡುವ ಸಂದರ್ಭದಲ್ಲಿ ಅವರ ಮಾತು ಮುಗಿಸಿ, ನಂತರ ನಮ್ಮ ಸಮ್ಮುಖದಲ್ಲೇ ಮಂಡನೆ ಮಾಡಬಹುದಿತ್ತು. ನಾವು ಕೂಡ ಪ್ರಸ್ತಾವನೆ ಸಂದರ್ಭದಲ್ಲೇ ಇದನ್ನು ಆಕ್ಷೇಪಿಸಲು ಸಿದ್ಧರಿದ್ದೆವು. ಸರ್ಕಾರ ಮಸೂದೆ ಮಂಡಿಸಿ ನಂತರ ಮತಕ್ಕೆ ಹಾಕಲು ಅವಕಾಶ ಮಾಡಿ ಕೊಡಬೇಕಿತ್ತು. ಬಹುಮತದ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಬಹುದಿತ್ತು. ಆದರೆ ಸ್ಪೀಕರ್ ಅವರು ರಾಜಕೀಯ ಪಕ್ಷದ ಸದಸ್ಯರಂತೆ ನಡೆದುಕೊಂಡಿದ್ದಾರೆ. ಅವರು ಕಾನೂನಿನ ಪ್ರಕಾರವಾಗಿ ನಡೆದುಕೊಂಡಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದರು.

ಗೋಹತ್ಯೆ ನಿಷೇಧ ಮಸೂದೆ ಮಂಡನೆ ಸಮಯದಲ್ಲಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಈಗಲೂ ಅವರು ವಿರೋಧಿಸುತ್ತೇವೆ ಎಂದು ಹೇಳಿ, ನಂತರ ಹಿಂದೆ ಸರಿಯುತ್ತಾರೆ. ನಾವು ಇಲ್ಲಿ ಯಾರನ್ನೂ ನಂಬಲು ಸಾಧ್ಯವಿಲ್ಲ. ಇದು ನಮ್ಮ ಅನುಭವ. ನಮಗೆ ಬಹುಮತ ಇದೆಯೋ, ಇಲ್ಲವೋ ಬೇರೆ ವಿಚಾರ. ಆದರೆ ಈ ಮಸೂದೆ ಸಂವಿಧಾನ ವಿರುದ್ಧವಾಗಿದೆ. ಈ ಮಸೂದೆಯಲ್ಲಿ ಶಿಕ್ಷಣ ಸಂಸ್ಥೆಗಳು ಉಚಿತ ಶಿಕ್ಷಣ ನೀಡುವ ಆಮಿಷ ನೀಡಲಾಗುತ್ತಿದೆ ಎಂಬ ಅಸಂಬದ್ಧ ಅಂಶಗಳಿವೆ’ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮತಾಂತರಗೊಂಡಾಗ ದೊಡ್ಡ ಪ್ರಮಾಣದಲ್ಲಿ ಸಾಮೂಹಿಕ ಮತಾಂತರ ನಡೆಯಿತು. ಇದು ಭಾರತದ ಇತಿಹಾಸ. ರಾಜ್ಯದಲ್ಲಿ ಅನೇಕ ವೈದ್ಯಕೀಯ, ಇಂಜಿನಿಯರಿಂಗ್, ಪದವಿ ಕಾಲೇಜು ಹಾಗೂ ಶಾಲೆಗಳು ಇವೆ. ಆಸ್ಪತ್ರೆಗಳು, ಧಾರ್ಮಿಕ ಸಂಸ್ಥೆಗಳಿವೆ. ಆದರೂ ಸಚಿವರ ಮಕ್ಕಳು ಕ್ರೈಸ್ತ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗುತ್ತಾರೆ. ಈಗಲೂ ಕೇಂದ್ರದ ಹಲವು ಸಚಿವರ ಮಕ್ಕಳು ಕ್ರೈಸ್ತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿದ್ದಾರೆ. ಈ ಮಸೂದೆ ರಾಜ್ಯದಲ್ಲಿ ಮುಂದೆ ಬರಬಹುದಾದ ಬಂಡವಾಳ ಹೂಡಿಕೆ ಮೇಲೂ ಕೆಟ್ಟ ಪರಿಣಾಮ ಬೀರಲಿದೆ. ವಿದೇಶಿ ಬಂಡವಾಳ ಹೂಡಿಕೆದಾರರು ರಾಜ್ಯಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಇದರ ವಿರುದ್ಧ ಹೋರಾಡುತ್ತದೆ. ನಾವು ಜನರ ಮುಂದೆ ಹೋಗುತ್ತೇವೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಈ ಮಸೂದೆಯನ್ನು ಹಿಂಪಡೆಯಲಿದೆ’ ಎಂದರು.

 

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

5 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

9 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

11 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

12 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

13 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

13 hours ago