Featured

ಮತಾಂತರ ನಿಷೇಧ ಮಸೂದೆ : ಕಾಂಗ್ರೆಸ್‌ ಅದನ್ನು ಸಂಪೂರ್ಣವಾಗಿ ವಿರೋಧಿಸಲಿದೆ : ಡಿಕೆಶಿ – Vishwanews24

ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆ ; ಕಾಂಗ್ರೆಸ್‌ ಅದನ್ನು ಸಂಪೂರ್ಣವಾಗಿ ವಿರೋಧಿಸಲಿದೆ : ಡಿಕೆಶಿ – Vishwanews24

ಬೆಂಗಳೂರು:  ರಾಜ್ಯದಲ್ಲಿ ಮತಾಂತರ ತಡೆಯಲು ಹೊಸ ಕಾಯ್ದೆ ಅಗತ್ಯವಿಲ್ಲ. ರಾಜ್ಯ ಸರ್ಕಾರವು ಬೆಳಗಾವಿ ಅಧಿವೇಶನದಲ್ಲಿ ರಾಜಕೀಯ ಪ್ರೇರಿತವಾಗಿ ಹೊಸದಾಗಿ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆ ಮಾಡಿದರೆ ಕಾಂಗ್ರೆಸ್‌ ಪಕ್ಷ ಅದನ್ನು ಸಂಪೂರ್ಣವಾಗಿ ವಿರೋಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒತ್ತಾಯ ಪೂರ್ವಕವಾಗಿ ಮತಾಂತರ ಮಾಡುವುದನ್ನು ತಡೆಯಲು ಈಗಾಗಲೇ ಕಾಯ್ದೆ ಇದೆ. ಈಗಾಗಲೇ ಅಸ್ತಿತ್ವದಲ್ಲಿರುವ ಕಾಯಿದೆಗೆ ದುರುದ್ದೇಶದಿಂದ ಹೆಚ್ಚುವರಿ ತಿದ್ದುಪಡಿ ತರುವುದನ್ನು ಕಾಂಗ್ರೆಸ್‌ ಸಂಪೂರ್ಣವಾಗಿ ವಿರೋಧಿಸಲಿದೆ. ಬಿಜೆಪಿ ಸರ್ಕಾರವು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ದ್ವೇಷದ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮುದಾಯಗಳಿಗೂ ಸಮಾನ ಗೌರವವಿದೆ. ಧಾರವಾ, ಕೊಡಗು ಮತ್ತಿತರ ಕಡೆ ಈಗಾಗಲೇ ಏನೇನಾಗಿದೆ ಎಂಬುದನ್ನು ನೋಡಿದ್ದೇವೆ. ನಮ್ಮದು ಜಾತ್ಯತೀತ ದೇಶಹಾಗೂ ರಾಜ್ಯ. ಇಡೀ ವಿಶ್ವ ನಮ್ಮನ್ನು ಗಮನಿಸುತ್ತಿದೆ. ಚರ್ಚ್‌ಗಳ ಮೇಲೆ ದಾಳಿ ಮಾಡುವುದು, ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವುದು ಸರಿಯಲ್ಲ. ಬಿಜೆಪಿ ಸರ್ಕಾರ ದುಸ್ಸಾಹಸಕ್ಕೆ ಕೈ ಹಾಕಬಾರದು. ಇದರಿಂದ ರಾಜ್ಯದ ಗೌರವಕ್ಕೆ ಧಕ್ಕೆ ಉಂಟಾಗುವುದಲ್ಲದೆ ಕಾನೂನು ಮತ್ತು ಸುವ್ಯವಸ್ಥೆಗೂ ಭಂಗ ಉಂಟಾಗಲಿದೆ ಎಂದು ಹೇಳಿದರು.

 

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

6 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

12 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

13 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

13 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

15 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

15 hours ago