ಬೆಂಗಳೂರು: ರಾಜ್ಯದಲ್ಲಿ ಮತಾಂತರ ತಡೆಯಲು ಹೊಸ ಕಾಯ್ದೆ ಅಗತ್ಯವಿಲ್ಲ. ರಾಜ್ಯ ಸರ್ಕಾರವು ಬೆಳಗಾವಿ ಅಧಿವೇಶನದಲ್ಲಿ ರಾಜಕೀಯ ಪ್ರೇರಿತವಾಗಿ ಹೊಸದಾಗಿ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆ ಮಾಡಿದರೆ ಕಾಂಗ್ರೆಸ್ ಪಕ್ಷ ಅದನ್ನು ಸಂಪೂರ್ಣವಾಗಿ ವಿರೋಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒತ್ತಾಯ ಪೂರ್ವಕವಾಗಿ ಮತಾಂತರ ಮಾಡುವುದನ್ನು ತಡೆಯಲು ಈಗಾಗಲೇ ಕಾಯ್ದೆ ಇದೆ. ಈಗಾಗಲೇ ಅಸ್ತಿತ್ವದಲ್ಲಿರುವ ಕಾಯಿದೆಗೆ ದುರುದ್ದೇಶದಿಂದ ಹೆಚ್ಚುವರಿ ತಿದ್ದುಪಡಿ ತರುವುದನ್ನು ಕಾಂಗ್ರೆಸ್ ಸಂಪೂರ್ಣವಾಗಿ ವಿರೋಧಿಸಲಿದೆ. ಬಿಜೆಪಿ ಸರ್ಕಾರವು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ದ್ವೇಷದ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮುದಾಯಗಳಿಗೂ ಸಮಾನ ಗೌರವವಿದೆ. ಧಾರವಾ, ಕೊಡಗು ಮತ್ತಿತರ ಕಡೆ ಈಗಾಗಲೇ ಏನೇನಾಗಿದೆ ಎಂಬುದನ್ನು ನೋಡಿದ್ದೇವೆ. ನಮ್ಮದು ಜಾತ್ಯತೀತ ದೇಶಹಾಗೂ ರಾಜ್ಯ. ಇಡೀ ವಿಶ್ವ ನಮ್ಮನ್ನು ಗಮನಿಸುತ್ತಿದೆ. ಚರ್ಚ್‌ಗಳ ಮೇಲೆ ದಾಳಿ ಮಾಡುವುದು, ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವುದು ಸರಿಯಲ್ಲ. ಬಿಜೆಪಿ ಸರ್ಕಾರ ದುಸ್ಸಾಹಸಕ್ಕೆ ಕೈ ಹಾಕಬಾರದು. ಇದರಿಂದ ರಾಜ್ಯದ ಗೌರವಕ್ಕೆ ಧಕ್ಕೆ ಉಂಟಾಗುವುದಲ್ಲದೆ ಕಾನೂನು ಮತ್ತು ಸುವ್ಯವಸ್ಥೆಗೂ ಭಂಗ ಉಂಟಾಗಲಿದೆ ಎಂದು ಹೇಳಿದರು.
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…
ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…
ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…
ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…