Featured

ಮತಾಂತರ ನಿಷೇಧ ಮಾತ್ರವಲ್ಲದೆ ರಾಜ್ಯದಲ್ಲಿ ಭಾರತೀಯ ಸಂಸ್ಕೃತಿ ಉಳಿಸುವ ಅನೇಕ ಕಾಯ್ದೆ ಜಾರಿಗೆ ತರುತ್ತೇವೆ :  ಈಶ್ವರಪ್ಪ – Vishwanews24

ಮತಾಂತರ ನಿಷೇಧ ಮಾತ್ರವಲ್ಲದೆ ರಾಜ್ಯದಲ್ಲಿ ಭಾರತೀಯ ಸಂಸ್ಕೃತಿ ಉಳಿಸುವ ಅನೇಕ ಕಾಯ್ದೆ ಜಾರಿಗೆ ತರುತ್ತೇವೆ :  ಈಶ್ವರಪ್ಪ

ಒಂದು ಧರ್ಮವನ್ನು ದೃಷ್ಟಿಯಲ್ಲಿಟ್ಟುಕೊಂಡೇ ಈ ಮತಾಂತರ ನಿಷೇಧ ಕಾಯ್ದೆ ತರುತ್ತಿರುವುದು.

ರಾಜ್ಯದಲ್ಲಿ  ಧರ್ಮವನ್ನು ಉಳಿಸುವ, ನಮ್ಮ ಸಹೋದರರನ್ನು ರಕ್ಷಿಸುವ ಪೂರ್ಣ ಬಹುಮತ ಬಿಜೆಪಿಗೆ ಇದೆ..

ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಹಲವೆಡೆ ಲವ್ ಜಿಹಾದ್ ಗೆ ಹೆಣ್ಣುಮಕ್ಕಳು ಬಲಿಯಾಗಿದ್ದಾರೆ. ಒಂದು ಧರ್ಮವನ್ನು ದೃಷ್ಟಿಯಲ್ಲಿಟ್ಟುಕೊಂಡೇ ಈ ಮತಾಂತರ ನಿಷೇಧ ಕಾಯ್ದೆ ತರುತ್ತಿರುವುದು. ಆ ಧರ್ಮದವರು ಹಿಂದೂ ಹೆಣ್ಣುಮಕ್ಕಳು, ಬಡ ಹಿಂದು ಜನರ ಮೇಲೆ ಕಣ್ಣಿಟ್ಟು, ಆಮಿಷವೊಡ್ಡಿಮತಾಂತರ ಮಾಡುತ್ತಿರುವುದು. ಇದು ಡಿ ಕೆ ಶಿವಕುಮಾರ್ ಅವರಿಗೆ ಗೊತ್ತಿಲ್ಲದಿದ್ದರೆ ಎಲ್ಲೆಲ್ಲಿ ಮತಾಂತರ ಮಾಡಿ ಹಿಂದೂ ಹೆಣ್ಣು ಮಕ್ಕಳನ್ನು ಮೋಸ ಮಾಡಿದ್ದಾರೆ ಎಂಬುದನ್ನು ನಾನೇ ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಜಾರಿಗೆ ವಿರೋಧ ಮಾಡುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿವ ಮತಾಂತರದ ದಂಧೆ ಬಗ್ಗೆ ಡಿಕೆಶಿ ಅವರಿಗೆ ನೇರವಾಗಿ ವೀರಶೈವ ಸಮಾಜದವರೇ ಹೇಳಿದ್ದಾರೆ ಆದರೆ ಡಿಕೆಶಿ ‌ ಕೇವಲ ಇದೆಲ್ಲವನ್ನೂ ಓಟಿನ ಲೆಕ್ಕವಾಗಿ ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿಕೆಶಿಯವರು ಓಟಿಗೋಸ್ಕರ ಮಾಡುತ್ತಿರುವ ಕೆಟ್ಟ ರಾಜಕಾರಣವಾಗಿದೆ. ಅವರು ನೀವು ಎಷ್ಟೇ ವಿರೋಧ ಮಾಡಿದರೂ , ರಾಜ್ಯದಲ್ಲಿ ಈ ಧರ್ಮವನ್ನು ಉಳಿಸುವ, ನಮ್ಮ ಸಹೋದರರನ್ನು ರಕ್ಷಿಸುವ ಪೂರ್ಣ ಬಹುಮತ ಬಿಜೆಪಿಗೆ ಇದೆ. ನಾವು ಇದನ್ನು ವಿಧಾನಸಭೆಯಲ್ಲಿ ಕಾಯ್ದೆಯನ್ನು ಪಾಸ್ ಮಾಡುತ್ತೇವೆ. ಇದು ಮಾತ್ರವಲ್ಲ ರಾಜ್ಯದಲ್ಲಿ ಭಾರತೀಯ ಸಂಸ್ಕೃತಿ ಉಳಿಸುವ ಅನೇಕ ಕಾಯ್ದೆ ತರುತ್ತೇವೆ ಎಂದು ಹೇಳಿದರು.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

9 hours ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

15 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

16 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

16 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

18 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

18 hours ago