ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ , ನಾಳೆ ಸದನದಲ್ಲಿ ವಿಧೇಯಕ ಮಂಡನೆ – Vishwanews24
ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ , ನಾಳೆ ಸದನದಲ್ಲಿ ವಿಧೇಯಕ ಮಂಡನೆ – Vishwanews24
ಬೆಳಗಾವಿ: ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ.
ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದ್ದು, ಮಂಗಳವಾರ ವಿಧಾನಸಭೆಯಲ್ಲಿ ವಿಧೇಯಕ ಮಂಡನೆ ಮಾಡುವ ಸಾಧ್ಯತೆ ದಟ್ಟವಾಗಿದೆ ಎಂದು ತಿಳಿದುಬಂದಿದೆ.
ಬೆಳಗಾವಿಯ ಅಧಿವೇಶನದಲ್ಲಿ ವಿಧೇಯಕ ಮಂಡನೆ ಮಾಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ಈ ಬಗ್ಗೆ ಗೊಂದಲ ಮುಂದುವರಿದಿತ್ತು. ಆದರೆ ಇದೀಗ ಸಂಪುಟ ಸಬೆಯಲ್ಲಿ ವಿಧೇಯಕ ಮಂಡನೆಗೆ ಅನುಮೋದನೆ ಸಿಕ್ಕಿದೆ.
ಈ ನಿಟ್ಟಿನಲ್ಲಿ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆಯೂ ನಡೆದಿದೆ. ಮತಾಂತರ ನಿಷೇಧ ವಿಧೇಯಕದ ಅಂತಿಮ ರೂಪುರೇಷೆ ಹಾಗೂ ವಿರೋಧ ಪಕ್ಷಗಳ ವಿರೋಧವನ್ನು ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ತಂತ್ರಗಾರಿಕೆ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.
