Featured

ಮತೀಯವಾದಿ ಶಕ್ತಿಗಳಿಗೆ ಜಾಗೃತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ : ಯಶ್ ಪಾಲ್ ಸುವರ್ಣ – Vishwanews24

ಮತೀಯವಾದಿ ಶಕ್ತಿಗಳಿಗೆ ಜಾಗೃತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ : ಯಶ್ ಪಾಲ್ ಸುವರ್ಣ – Vishwanews24

ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ಹಿಂದೂ ಕನಯ್ಯ ಲಾಲ್ ರವರ ಅಮಾನುಷ ಕಗ್ಗೊಲೆ ಮತಾಂಧ ಶಕ್ತಿಗಳ ವಿಕೃತ ಐಸಿಸ್ ಮಾನಸಿಕತೆಗೆ ಸಾಕ್ಷಿಯಾಗಿದ್ದು, ಘಟನೆಯ ಬಗ್ಗೆ ಜಾತ್ಯತೀತವಾದಿ, ಸ್ವಯಂ ಘೋಷಿತ ವಿಚಾರವಾದಿಗಳ ದಿವ್ಯ ಮೌನ ದೇಶದ ಆಂತರಿಕ ಭದ್ರತೆಗೆ ಆತಂಕಕಾರಿ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂಪುರ್ ಶರ್ಮ ಹೇಳಿಕೆಯನ್ನು ಸಮರ್ಥಿಸಿದ ಎಂಬ ಏಕೈಕ ಕಾರಣಕ್ಕೆ ಅಮಾನುಷವಾಗಿ ಹತ್ಯೆ ಮಾಡಿ, ಘಟನೆಯ ವೀಡಿಯೋ ಮಾಡಿ ಪ್ರಧಾನಿ ನರೇಂದ್ರ ಮೋದಿ ಯವರನ್ನೂ ಹತ್ಯೆ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಷ್ಟೀಯ ತನಿಖಾದಳದ ಮೂಲಕ ತನಿಖೆ ನಡೆಯುತ್ತಿದ್ದು ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮದ ಭರವಸೆಯಿದೆ. ಸಂಘಟಿತ ಹಿಂದೂ ಸಮಾಜ ಮಾತ್ರ ಈ ಐಸಿಸ್ ಮಾನಸಿಕತೆಯ ಮತಾಂಧ ಶಕ್ತಿಗಳಿಗೆ ದಿಟ್ಟ ಉತ್ತರ ನೀಡಲು ಸಾಧ್ಯವಿದೆ.

ಇಸ್ಲಾಮೀ ಭಯೋತ್ಪಾದನೆ ಮೂಲಕ ಸಮಾಜದಲ್ಲಿ ಆಂತರಿಕ ಭದ್ರತೆಗೆ ಸವಾಲೊಡ್ಡಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸುತ್ತಿರುವ ಮತೀಯವಾದಿಗಳ ವಿರುದ್ಧ ಬಹು ಸಂಖ್ಯಾತ ಸಮಾಜ ಸ್ವಯಂ ಜಾಗೃತರಾಗಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ.

ಲವ್ ಜೆಹಾದ್, ಹಿಜಾಬ್ ಮುಂತಾದ ವಿವಾದಗಳನ್ನು ಸೃಷ್ಟಿಸಿ ದೇಶದಾದ್ಯಂತ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಷಡ್ಯಂತ್ರದ ಮುಂದುವರಿದ ಭಾಗವಾಗಿ ರಾಜಸ್ಥಾನದ ಅಮಾನುಷ ಘಟನೆ ನಡೆದಿದೆ.

ರಾಷ್ಟೀಯವಾದಿ ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಬೆದರಿಕೆಯ ಮೂಲಕ ದೇಶಪ್ರೇಮಿ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುವ ಮತೀಯವಾದಿ ಶಕ್ತಿಗಳಿಗೆ ಜಾಗೃತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

20 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

20 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

20 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

21 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

21 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago