Featured

ಮತ್ತೆ ಈ ರೀತಿ ಬಾಂಬ್ ಸ್ಫೋಟ ಪ್ರಕರಣಗಳು ಆಗದಂತೆ ಸರ್ಕಾರ ನೋಡಿಕೊಳ್ಳುತ್ತದೆ : ಈಶ್ವರ್ ಖಂಡ್ರೆ – Vishwanews24

ಬಾಂಬ್ ಸ್ಫೋಟದ  ಕೃತ್ಯ ಮಾಡಿದವರು ಎಲ್ಲಿ ಇದ್ದರೂ ಹುಡುಕಿ ಕಾನೂನು ಕ್ರಮ ಜರಗಿಸುತ್ತೇವೆ : ಈಶ್ವರ್ ಖಂಡ್ರೆ

ಬೀದರ್: ಬಾಂಬ್ ಸ್ಫೋಟದ  ಕೃತ್ಯ ಮಾಡಿದವರು ಎಲ್ಲಿ ಇದ್ದರೂ ಹುಡುಕಿ ಕಾನೂನು ಕ್ರಮ ಜರಗಿಸುತ್ತೇವೆ ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.

ರಾಮೇಶ್ವರಂ ಕೆಫೆ ಬ್ಲಾಸ್ಟ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮಾಡಿ ಯಾರೇ ಆರೋಪಿಗಳು ಇದ್ದರೂ ಕಠಿಣವಾದ ಶಿಕ್ಷೆ ಕೊಡುತ್ತೇವೆ. ಜೊತೆಗೆ ಮತ್ತೆ ಈ ರೀತಿ ಪ್ರಕರಣಗಳು ಆಗದಂತೆ ಸರ್ಕಾರ ನೋಡಿಕೊಳ್ಳುತ್ತದೆ ಎಂದರು.

ಇನ್ನು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ದೇಶ ವಿರೋಧ, ಸಮಾಜಘಾತುಕ ಶಕ್ತಿಗಳು ಇದ್ದಾರೋ ಅಂಥವರ ಮೇಲೆ ಅತ್ಯಂತ ಕಠಿಣವಾದ ಕ್ರಮ ಜರಗಿಸುತ್ತೇವೆ. ದೊಡ್ಡ ವ್ಯಕ್ತಿ ಇದ್ದರೂ, ಸಂಘಟನೆಗಳಿದ್ದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಘೋಷಣೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚುತ್ತಿದ್ದೇವೆ. ರಾಷ್ಟ್ರಪ್ರೇಮ, ದೇಶಭಕ್ತಿ ಯಾರ ಸ್ವತ್ತಲ್ಲಾ. 140 ಕೋಟಿ ಜನರು ರಾಷ್ಟ್ರ ಭಕ್ತರೇ ಇದ್ದಾರೆ ಎಂದು ಬಿಜೆಪಿ ನಾಯಕರಿಗೆ ಖಂಡ್ರೆ ಟಾಂಗ್ ನೀಡಿದರು. ಇದರ ಹಿಂದೆ ಯಾರ ಕೈವಾಡವಿದೆ? ಯಾರು ಆರೋಪ ಮಾಡುತ್ತಾರೆ ಅವರ ಕೈವಾಡವಿರುತ್ತೆ ಎಂದು ಬಿಜೆಪಿ (BJP) ವಿರುದ್ಧ ಖಂಡ್ರೆ ಗಂಭೀರ ಆರೋಪ ಮಾಡಿದರು.

Vishwa News 24

Recent Posts

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

33 minutes ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

48 minutes ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

55 minutes ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 hour ago

ಉಡುಪಿ ನಗರಸಭೆ ವ್ಯಾಪ್ತಿಯ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ಅನುದಾನ ಮಂಜೂರು ಮಾಡುವಂತೆ  ಶಾಸಕ ಯಶ್ ಪಾಲ್ ಮನವಿ – vishwanews24

ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…

3 hours ago

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ – vishwanews24

ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…

4 hours ago