ಬೀದರ್: ಬಾಂಬ್ ಸ್ಫೋಟದ ಕೃತ್ಯ ಮಾಡಿದವರು ಎಲ್ಲಿ ಇದ್ದರೂ ಹುಡುಕಿ ಕಾನೂನು ಕ್ರಮ ಜರಗಿಸುತ್ತೇವೆ ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ರಾಮೇಶ್ವರಂ ಕೆಫೆ ಬ್ಲಾಸ್ಟ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮಾಡಿ ಯಾರೇ ಆರೋಪಿಗಳು ಇದ್ದರೂ ಕಠಿಣವಾದ ಶಿಕ್ಷೆ ಕೊಡುತ್ತೇವೆ. ಜೊತೆಗೆ ಮತ್ತೆ ಈ ರೀತಿ ಪ್ರಕರಣಗಳು ಆಗದಂತೆ ಸರ್ಕಾರ ನೋಡಿಕೊಳ್ಳುತ್ತದೆ ಎಂದರು.
ಇನ್ನು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ದೇಶ ವಿರೋಧ, ಸಮಾಜಘಾತುಕ ಶಕ್ತಿಗಳು ಇದ್ದಾರೋ ಅಂಥವರ ಮೇಲೆ ಅತ್ಯಂತ ಕಠಿಣವಾದ ಕ್ರಮ ಜರಗಿಸುತ್ತೇವೆ. ದೊಡ್ಡ ವ್ಯಕ್ತಿ ಇದ್ದರೂ, ಸಂಘಟನೆಗಳಿದ್ದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಘೋಷಣೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚುತ್ತಿದ್ದೇವೆ. ರಾಷ್ಟ್ರಪ್ರೇಮ, ದೇಶಭಕ್ತಿ ಯಾರ ಸ್ವತ್ತಲ್ಲಾ. 140 ಕೋಟಿ ಜನರು ರಾಷ್ಟ್ರ ಭಕ್ತರೇ ಇದ್ದಾರೆ ಎಂದು ಬಿಜೆಪಿ ನಾಯಕರಿಗೆ ಖಂಡ್ರೆ ಟಾಂಗ್ ನೀಡಿದರು. ಇದರ ಹಿಂದೆ ಯಾರ ಕೈವಾಡವಿದೆ? ಯಾರು ಆರೋಪ ಮಾಡುತ್ತಾರೆ ಅವರ ಕೈವಾಡವಿರುತ್ತೆ ಎಂದು ಬಿಜೆಪಿ (BJP) ವಿರುದ್ಧ ಖಂಡ್ರೆ ಗಂಭೀರ ಆರೋಪ ಮಾಡಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…