Featured

ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಚರ್ಚೆ ರಾಜ್ಯದ ಉದ್ದಗಲಕ್ಕೂ ಆರಂಭವಾಗಿದೆ :ಸಿದ್ದರಾಮಯ್ಯ -Vishwanews24

ನಾಡಿನ ಜನ ಯಾಕಾದ್ರೂ ಕಾಂಗ್ರೆಸ್‌ನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ..

ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ

ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಚರ್ಚೆ ರಾಜ್ಯದ ಉದ್ದಗಲಕ್ಕೂ ಆರಂಭವಾಗಿದೆ :ಸಿದ್ದರಾಮಯ್ಯ -Vishwanews24

ಬೆಂಗಳೂರು, : ನಾಡಿನ ಜನ ಯಾಕಾದ್ರೂ ಕಾಂಗ್ರೆಸ್‌ನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ದ ಸರಣಿ ಟ್ವೀಟ್‌ ಮೂಲಕ ಟೀಕೆ ಮಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತ, ಜನವಿರೋಧಿ ನೀತಿಗಳಿಂದಾಗಿ ನಾಡಿನ ಜನ ಯಾಕಾದ್ರೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಚರ್ಚೆ ರಾಜ್ಯದ ಉದ್ದಗಲಕ್ಕೂ ಆರಂಭವಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ಮತ್ತೊಮ್ಮೆ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದೆ ಎನ್ನುವುದಕ್ಕೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದೆ. ಮುಖ್ಯಮಂತ್ರಿಗಳು ತಾವು ಪ್ರಾಮಾಣಿಕರಾಗಿದ್ದರೆ ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲು ಏಕೆ ನಿರಾಕರಿಸುತ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.

ಒಂದೆಡೆ ಕೊರೊನಾದಿಂದ ಜನ ಸಾಯುತ್ತಿದ್ದಾರೆ, ಇತ್ತ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಬಡ ವಿದ್ಯಾರ್ಥಿಗಳಿಗೆ ವಿತರಿಸುವ ಲ್ಯಾಪ್‌ಟಾಪ್‌, ವೈದ್ಯಕೀಯ ಉಪಕರಣಗಳ ಖರೀದಿ ಸೇರಿ ಎಲ್ಲಿ ಸಾಧ್ಯವೋ ಅಲ್ಲೆಲ್ಲಾ ಬರೀ ಭ್ರಷ್ಟಾಚಾರ. ಹೆಣಗಳ ಮೇಲೆ ದುಡ್ಡು ಮಾಡುವ ಇಂಥ ಸರ್ಕಾರವನ್ನು ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲು ನೋಡುತ್ತಿರೋದು ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಸಾಲದ ಮೇಲೆ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದೆ. ಕೇಂದ್ರದಿಂದ ಬರಬೇಕಾದ ಯಾವ ಅನುದಾನವನ್ನೂ ಕೇಳುವ ಧೈರ್ಯ ಬಿಜೆಪಿ ಸಚಿವರಿಗಾಗಲೀ, ಶಾಸಕರಿಗಾಗಲೀ ಅಥವಾ ಸಂಸದರಿಗಾಗಲೀ ಇಲ್ಲ. ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಟೀಕಿಸಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

6 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

6 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

6 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

7 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

7 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

7 hours ago