Featured

ಮತ್ತೆ ಪಕ್ಷವನ್ನುಅಧಿಕಾರಕ್ಕೆ ತರುವ ವಿಶ್ವಾಸದೊಂದಿಗೆ ಇಲ್ಲಿಂದ ಹೋಗುತ್ತಿದ್ದೇನೆ : ವಿಧಾನಸಭೆಯಲ್ಲಿ ಬಿ.ಎಸ್ ಯಡಿಯೂರಪ್ಪ ವಿದಾಯ ಭಾಷಣ – Vishwanews24

ನಾನು ಇಷ್ಟು ಎತ್ತರಕ್ಕೆ ಬೆಳೆಯಲು ಕಾರಣ ಆರ್‌ಎಸ್‌ಎಸ್..

ಮತ್ತೆ ರಾಜ್ಯದಲ್ಲಿ ಓಡಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ..

ನಮ್ಮೆಲ್ಲರಿಗೂ ಹೆಚ್.ಡಿ.ದೇವೇಗೌಡರೇ ಆದರ್ಶ..

ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ..

ವಿಧಾನಸಭೆಯಲ್ಲಿ ಬಿ.ಎಸ್ ಯಡಿಯೂರಪ್ಪ ವಿದಾಯ ಭಾಷಣ..

ಬೆಂಗಳೂರು: ಪಕ್ಷದ ಏಳಿಗೆಗಾಗಿ, ಪಕ್ಷವನ್ನು ಬೆಳೆಸಲು ಕೊನೆ ಉಸಿರು ಇರುವವರೆಗೂ ಹೋರಾಡುತ್ತೇನೆ. ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇನೆ. ಆ ವಿಶ್ವಾಸದೊಂದಿಗೆ ಇಲ್ಲಿಂದ ಹೋಗುತ್ತಿದ್ದೇನೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಧಾನಸಭೆಯಲ್ಲಿ ವಿದಾಯ ಭಾಷಣ ಮಾಡಿದ್ದಾರೆ.

ವಿಧಾನ ಸಭೆಯಲ್ಲಿ ಮಾತನಾಡಿದ ಅವರು, ಈ ಸದನದವನ್ನು ಅಧ್ಯಕ್ಷರಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಯಶಸ್ವಿಯಾಗಿ ನಡೆಸಿದ್ದಾರೆ. ನೀವು ಮುಂದಿನ ಬಾರಿ ಮಂತ್ರಿಯಾಗಿ ಇಲ್ಲಿ ಕೂರಬೇಕು. ಇಲ್ಲಿ ಮಹಿಳೆಯರು ಹೆಚ್ಚು ಆಯ್ಕೆ ಆಗಬೇಕು ಎಂದು ನುಡಿದರು.ಶಿಕಾರಿಪುರದ ಜನರಿಗೆ ಧನ್ಯವಾದ ತಿಳಿಸಿದ ಯಡಿಯೂರಪ್ಪ, ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಫೆಬ್ರವರಿ 27ಕ್ಕೆ ನನಗೆ 80 ವರ್ಷ ತುಂಬುತ್ತದೆ. ಪ್ರಧಾನಿ ನರೇಂದ್ರ ಮೋದಿ ನನ್ನ ಹುಟ್ಟು ಹಬ್ಬಕ್ಕೆ ಬರಲಿದ್ದಾರೆ. ಅಂದೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ ಎಂದರು.

ಮಾಜಿ ಪ್ರಧಾನಿ ದೇವೇಗೌಡರನ್ನು ಹೊಗಳಿದ ಬಿಎಸ್‌ವೈ, ಅವರು ನಮಗೆ ಆದರ್ಶ. ಅವರನ್ನು ನೋಡಿ ಕಲಿಯುವಂತದ್ದು ತುಂಬಾ ಇದೆ. ಈ ವಯಸ್ಸಿನಲ್ಲೂ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡುತ್ತಾರೆ, ಚಿಂತನೆ ಮಾಡುತ್ತಾರೆ. ಅವರು ನಮಗೆ ಆದರ್ಶ ಎಂದರು. ಇದೇ ವೇಳೆ ವಾಜಪೇಯಿಯವರನ್ನು ಯಡಿಯೂರಪ್ಪ ಅವರು ನೆನೆಸಿಕೊಂಡಾಗ ಪಕ್ಷಭೇದ ಮರೆತು ಶಾಸಕರು ಚಪ್ಪಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಎಂ ಬಸವರಾಜ ಬೊಮ್ಮಾಯಿ ಜನರು ಮರೆಯಲಾಗದ ರೀತಿಯಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಕೊಡುಗೆ ಕೊಟ್ಟಿದ್ದಾರೆ. ಮುಂಬರುವ ದಿನಗಳಲ್ಲಿ ಅದರ ಫಲ ಅವರಿಗೆ ಸಿಗಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡಾ ಯಶಸ್ವಿಯಾಗಿ ಕೆಲಸ ನಿರ್ವಹಿಸಿದ್ದಾರೆ. ಎಟಿ ರಾಮಸ್ವಾಮಿ ಸೇರಿದಂತೆ ಹಲವರು ಉತ್ತಮ ಕೆಲಸ ಮಾಡಿದ್ದಾರೆ ಎಂದರು.

ನಾನು ಇಷ್ಟು ಎತ್ತರಕ್ಕೆ ಬೆಳೆಯಲು ಕಾರಣ ಆರ್‌ಎಸ್‌ಎಸ್. ಅಲ್ಲಿ ಸಿಕ್ಕಿದ ತರಬೇತಿಯಿಂದ ನನಗೆ ಇಷ್ಟೆಲ್ಲಾ ಸ್ಥಾನಮಾನಗಳು ಸಿಕ್ಕಿದೆ. ನಾನು ಇನ್ನು ಚುನಾವಣೆಗೆ ನಿಲ್ಲಲ್ಲ ಎಂಬ ತೀರ್ಮಾನ ಮಾಡಿದ್ದೇನೆ. ಮತ್ತೆ ರಾಜ್ಯದಲ್ಲಿ ಓಡಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದು ನನ್ನ ಗುರಿ. ನೀವೆಲ್ಲರೂ ಮತ್ತೆ ಆಯ್ಕೆಯಾಗಿ ಬರಬೇಕು. ಆಡಳಿತ ಪಕ್ಷದ ಯಾರೂ ವಿಚಲಿತರಾಗಬೇಕಿಲ್ಲ. ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ನನಗಿದೆ ಎಂದು ಹೇಳಿದರು

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

8 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

8 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

9 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

9 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

9 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

10 hours ago