ಉಡುಪಿ/ಚಿಕ್ಕಮಗಳೂರು, (Vishwanews24): ನಕ್ಸಲರ ಚಟುವಟಿಕೆ ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಮತ್ತೆ ಪ್ರಾರಂಭವಾಗಿದೆ. ಇವೆರಡು ಜಿಲ್ಲೆಯಲ್ಲಿ ಓಡಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಈ ಜಿಲ್ಲೆಗಳ ಕೆಲ ಭಾಗಗಳಲ್ಲಿ 5 ದಿನ ಹೈ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸುವುದರೊಂದಿಗೆ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್)ಗೆ ಸೂಚಿಸಲಾಗಿದೆ. ಕೇರಳದಿಂದ ನಕ್ಸಲರು ಉಡುಪಿ ಜಿಲ್ಲೆಯ ಬೈಂದೂರಿಗೆ ಆಗಮಿಸಿರುವ ಶಂಕೆ ವ್ಯಕ್ತವಾಗಿದೆ.
ನಕ್ಸಲ್ ಮುಖಂಡ ಸಾಕೇತ್ ರಾಜನ್ ಸಾವಿನ ಬಳಿಕ ವಿಕ್ರಮ್ ಗೌಡ ತಲೆಮರೆಸಿಕೊಂಡಿದ್ದ. ಇದೀಗ ನಕ್ಸಲ್ ನಾಯಕ ವಿಕ್ರಮ್ ಗೌಡ ಹಾಗೂ ಆತನ ಸಹಚರರು ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಓಡಾಟ ನಡೆಸುತ್ತಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಕಲ್ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪೊಲೀಸರಿಗೆ ನಕ್ಸಲ್ ಓಡಾಟದ ಮಾಹಿತಿ ದೊರೆತ ಬೆನ್ನಲ್ಲೇ, ವರ್ಷಗಳ ಬಳಿಕ ಮತ್ತೆ ಬೈಂದೂರಿನಲ್ಲಿ ಕೂಂಬಿಂಗ್ ಆರಂಭಗೊಳ್ಳುವ ಸಾಧ್ಯತೆ ಇದೆ.
ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ಸುಮಾರು 20 ವರ್ಷಗಳ ಹಿಂದೆ ನಕ್ಸಲೈಟ್ ಆಗಿದ್ದನು. ಕೇರಳದಲ್ಲಿ ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿದ್ದ ಈತ ಬಿ.ಜಿ ಕೃಷ್ಣಮೂರ್ತಿ ನಂತರ ರಾಜ್ಯದ ನಕ್ಸಲ್ ನಾಯಕತ್ವವನ್ನು ವಹಿಸಿಕೊಂಡಿದ್ದಾನೆ. ಇನ್ನು ಕಳೆದ ಕಳೆದ ಒಂದು ತಿಂಗಳಿನ ಹಿಂದೆ ಕೇರಳದ ಥಂಡರ್ಕೂಲ್ ನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ಮಧ್ಯೆ ನಕ್ಸಲರು ಕರ್ನಾಟಕವನ್ನು ಪ್ರವೇಶಿಸಿದ್ದಾರೆ ಎನ್ನಲಾಗುತ್ತಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…