Featured

ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ವರ್ತೂರ್ ಸಂತೋಷ್ – Vishwanews24

ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ ವರ್ತೂರ್ ಸಂತೋಷ್

ಜಾಮೀನು ದೊರೆತ ಹಿನ್ನೆಲೆಯಲ್ಲಿ ಜೈಲಿನಿಂದ ಶುಕ್ರವಾರವೇ ಹೊರಬಂದಿರುವ ವರ್ತೂರ್ ಸಂತೋಷ್  ಮತ್ತೆ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡಲಿದ್ದಾರೆ. ದೊಡ್ಮನೆ ಪ್ರವೇಶದ ಹಿನ್ನೆಲೆಯಲ್ಲೇ ನಿನ್ನೆ ಅವರನ್ನು ಮಾಧ್ಯಮಗಳ ಮುಂದೆ ಹೋಗದಂತೆ ತಡೆಯಲಾಯಿತು. ಕನಿಷ್ಠ ಅವರ ಕುಟುಂಬದ ಜೊತೆಯೂ ಮಾತನಾಡಲಿಕ್ಕೆ ಅವಕಾಶ ಕಲ್ಪಿಸಿಲ್ಲ.

ಬಿಗ್ ಬಾಸ್ ನಿಯಮದ ಪ್ರಕಾರ, ಒಂದು ಸಲ ಬಿಗ್ ಬಾಸ್ ಮನೆಗೆ ಪ್ರವೇಶ ಪಡೆದ ನಂತರ ಮತ್ತೆ ಅವರು ಕುಟುಂಬದೊಂದಿಗೆ ಸಂಪರ್ಕ ಮಾಡುವುದಾಗಲಿ ಮತ್ತು ಕುಟುಂಬದ ಸದಸ್ಯರ ಜೊತೆ ಬೆರೆಯುವುದಾಗಲಿ ಮಾಡುವಂತಿಲ್ಲ. ಆ ನಿಯಮವನ್ನು ವರ್ತೂರ್ ಕೂಡ ಮಾಡಿದ್ದಾರೆ. ಹಾಗಾಗಿ ಜೈಲಿನಿಂದ ಸೀದಾ ಅವರು ಬಿಗ್ ಬಾಸ್ ಮನೆಗೆ ಹೋಗಿದ್ದಾರೆ.

ನಿನ್ನೆ ರಾತ್ರಿಯೇ ಬೆಂಗಳೂರಿನ ದೊಡ್ಡ ಆಲದ ಮರ ಬಳಿ ನಿರ್ಮಿಸಲಾದ ಬಿಗ್ ಬಾಸ್ ಮನೆಗೆ ಸಂತೋಷ್ ಅವರನ್ನು ಕರೆದುಕೊಂಡು ಹೋಗಲಾಗಿದೆ. ನಂತರ ಅವರಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. ದೈಹಿಕ ಮತ್ತು ಮಾನಸಿಕ ಆರೋಗ್ಯದ ತಪಾಸಣೆ ನಂತರವೇ ಅವರನ್ನು ಬಿಗ್ ಬಾಸ್ ಮನೆ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ ಎನ್ನುತ್ತಿವೆ ಮೂಲಗಳು.

ನಿನ್ನೆಯೇ ಬಿಗ್ ಬಾಸ್ ತಂಡವನ್ನು ಸೇರಿರುವ ಸಂತೋಷ್, ಇಂದು ಬಿಗ್ ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ. ಅದು ಹೇಗೆ ಎನ್ನುವ ಗೌಪ್ಯತೆಯನ್ನು ಕಾಪಾಡಿಕೊಳ್ಳಲಾಗಿದೆ. ಬಿಗ್ ಬಾಸ್ ಮನೆಗೆ ಹೋಗುವ ಕುರಿತು ಸಂತೋಷ್ ತಾಯಿಯೂ ಖಚಿತ ಪಡಿಸಿದ್ದಾರೆ. ಅವರ ಎಂಟ್ರಿ ಹೇಗಿರಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.

Vishwa News 24

Recent Posts

ಕಸದ ಚೀಲ – ವಿಭಿನ್ನ ಕಥೆಯ ಮೂಲಕ ಗಮನ ಸೆಳೆದ ಉಡುಪಿಯ ಯುವ ಬರಹಗಾರ ಸುಮಂತ್ ಗಾಣಿಗ – vishwanews24

‘ಕಸದ ಚೀಲ’ದ ಮೂಲಕ ವಿಭಿನ್ನ ಕಥನ – ಉಡುಪಿಯ ಸುಮಂತ್ ಗಾಣಿಗ ಅವರ ಬರವಣಿಗೆಗೆ ಮೆಚ್ಚುಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

24 minutes ago

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ – vishwanews24

ಎಲ್ಲಾ ಮಾದರಿಯ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಹರ್ಮನ್‌ಪ್ರೀತ್ ಕೌರ್ "ರಕ್ತ, ಬೆವರು ಹರಿಸಿ ಸೇವೆ ಸಲ್ಲಿಸಿದ್ದೇನೆ" : ಸಾಮಾಜಿಕ ಜಾಲತಾಣದಲ್ಲಿ…

58 minutes ago

ಉಡುಪಿ: ಅ.8 ರಂದು ನೇರ ಸಂದರ್ಶನ – vishwanews24

ಉಡುಪಿ: ಅ.8 ರಂದು ನೇರ ಸಂದರ್ಶನ      ಉಡುಪಿ: ನಗರದ ಶಾಂತ ಎಲೆಕ್ಟಿçಕಲ್ಸ್ ಪ್ರೆöÊ.ಲಿ., ಆಭರಣ ಜುವೆರ‍್ಸ್ ಹತ್ತಿರ, ಕಾರ್ಪೋರೇಶನ್ ಬ್ಯಾಂಕ್…

1 hour ago

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ – vishwanews24

ಹಳೆಕೋಟ–ಕಡವಾಡ ಕ್ರಾಸ್ ರಸ್ತೆ ದುರಸ್ತಿ ಆಗ್ರಹಿಸಿ ಜಿಲ್ಲಾಧಿಕಾರಿಗೆ ಕರವೇ ಮನವಿ ಕಾರವಾರ  ಇಳಕಲ್ ಕೈಗಾ ರಾಜ್ಯ ರಸ್ತೆಯ ಹಳೆಕೋಟದಿಂದ  ಕಡವಾಡ…

2 hours ago

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ – vishwanews24

ಪುತ್ತೂರು: ಹಿಂಸಾತ್ಮಕ ರೀತಿಯಲ್ಲಿ ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳ ಸಾಗಾಟ ; ಓರ್ವ ಅರೆಸ್ಟ್‌, ಇಬ್ಬರು ಪರಾರಿ ಪುತ್ತೂರು: ಯಾವುದೇ ಪರವಾನಿಗೆಯಿಲ್ಲದೆ…

2 hours ago

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

15 hours ago