ಚೆನ್ನೈ: ರಾಜಕೀಯಕ್ಕೆ ಮತ್ತೆ ಪ್ರವೇಶದ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿಸಿದ ಕೇವಲ ಒಂದು ಗಂಟೆಯೊಳಗೆ ಮತ್ತೆ ರಾಜಕೀಯಕ್ಕೆ ಎಂದಿಗೂ ಬರುವುದಿಲ್ಲ ಎಂದು ಪ್ರತಿಪಾದಿಸುವ ಮೂಲಕ ಸೂಪರ್ ಸ್ಟಾರ್ ರಜನಿಕಾಂತ್, ಸಾವಿರಾರು ಅಭಿಮಾನಿಗಳ ನಿರೀಕ್ಷೆಯನ್ನು ಭಗ್ನಗೊಳಿಸಿದ್ದಾರೆ.
ರಜಿನಿ ಮಕ್ಕಳ್ ಮಂದ್ರಾಮ್ ನ್ನು ವಿಸರ್ಜಿಸಲಾಗುವುದು, ಅದು ರಜನಿಕಾಂತ್ ರಾಸಿಗರ್ ನರ್ಪಾಣಿ ಮಂದ್ರಾಮ್ ಫ್ಯಾನ್ಸ್ ಕ್ಲಬ್ ಆಗಿ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ.
ಆರ್ ಎಂಎಂ ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಿದ ನಂತರ ಹೇಳಿಕೆ ನೀಡಿದ ರಜನಿಕಾಂತ್, ವಿವಿಧ ಸಮಸ್ಯೆಗಳಿಂದಾಗಿ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ. ಭವಿಷ್ಯದಲ್ಲೂ ಯಾವುದೇ ಉದ್ದೇಶ ಇಟ್ಟುಕೊಂಡು ರಾಜಕೀಯಕ್ಕೆ ಬರವುದಿಲ್ಲ, ಆರ್ ಎಂಎಂನ್ನು ವಿಸರ್ಜಿಸಲಾಗುವುದು, ಅದು ರಜನಿಕಾಂತ್ ರಾಸಿಗರ್ ನರ್ಪಾಣಿ ಮಂದ್ರಮ್ ಫ್ಯಾನ್ಸ್ ಕ್ಲಬ್ ಆಗಿ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.
ಕಳೆದ ವರ್ಷ ಡಿಸೆಂಬರ್ ನಲ್ಲಿ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ ನಂತರ ಮಂದ್ರಮ್ ಸ್ಥಿತಿ ಮತ್ತು ಅದರ ಕರ್ತವ್ಯಗಳ ಬಗ್ಗೆ ಪದಾಧಿಕಾರಿಗಳು ಹಾಗೂ ಅಭಿಮಾನಿಗಳಲ್ಲಿ ಪ್ರಶ್ನೆ ಎದ್ದಿತ್ತು. ಈ ಸಮಸ್ಯೆಯನ್ನು ಬಗೆಹರಿಸುವುದು ನನ್ನ ಕರ್ತವ್ಯ ಎಂದರು.
ಕಳೆದ ವರ್ಷ ಡಿಸೆಂಬರ್ 29 ರಂದು ರಾಜಕೀಯಕ್ಕೆ ಬರುವುದಿಲ್ಲ ಎಂದು ರಜನಿಕಾಂತ್ ಘೋಷಣೆ ಮಾಡಿದ್ದರು. ನಾನು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಲೀ ಅಥವಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಅವರು ಹೇಳಿಕೆ ನೀಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…