ಮುಂಬೈ: ವಾಣಿಜ್ಯ ನಗರಿ ಮುಂಬೈ ಶನಿವಾರ ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದ್ದು, ಹಲವಾರು ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಮುಂಬೈ-ಕೊಲ್ಲಾಪುರ ಎಕ್ಸ್ ಪ್ರೆಸ್ ಜಲಾವೃತದಿಂದಾಗಿ ಮಾರ್ಗ ಮಧ್ಯೆದಲ್ಲಿ ನಿಂತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಬೈಗೆ ಬರಬೇಕಾಗಿದ್ದ 17 ವಿಮಾನಗಳ ತನ್ನ ದಿಕ್ಕು ಬದಲಿಸಿದೆ.
ಭಾರೀ ಮಳೆಯಿಂದಾಗಿ 11 ವಿಮಾನಗಳ ಹಾರಾಟ ರದ್ದಾಗಿದ್ದು, ಸುಮಾರು 17 ವಿಮಾನಗಳು ಮುಂಬೈ ವಿಮಾನ ನಿಲ್ದಾಣದತ್ತ ಕಳುಹಿಸಲಾಗಿದೆ ಎಂದು ವರದಿ ವಿವರಿಸಿದೆ. ಥಾಣೆ, ಕಲ್ಯಾಣ್ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಕ್ಷಣಾ ಕಾರ್ಯಕ್ಕೆ ಎನ್ ಡಿಆರ್ ಎಫ್ ಪಡೆ ಆಗಮಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿಯಿಂದಲೇ ಮುಂಬೈಯಲ್ಲಿ ಧಾರಾಕಾರ ಮಳೆ ಸುರಿಯತೊಡಗಿದೆ. ಥಾಣೆ ಮತ್ತು ಪಾಲ್ ಘರ್ ನಲ್ಲಿ ಭಾರೀ ಮಳೆಯಾಗಿರುವುದಾಗಿ ವರದಿ ಹೇಳಿದೆ. ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎನ್ ಡಿಆರ್ ಎಫ್ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…