Featured

ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋದ ವಾಣಿಜ್ಯ ನಗರಿ ಮುಂಬೈ -Vishwanews24

ಮುಂಬೈ: ವಾಣಿಜ್ಯ ನಗರಿ ಮುಂಬೈ ಶನಿವಾರ ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದ್ದು, ಹಲವಾರು ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಮುಂಬೈ-ಕೊಲ್ಲಾಪುರ ಎಕ್ಸ್ ಪ್ರೆಸ್ ಜಲಾವೃತದಿಂದಾಗಿ ಮಾರ್ಗ ಮಧ್ಯೆದಲ್ಲಿ ನಿಂತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಬೈಗೆ ಬರಬೇಕಾಗಿದ್ದ 17 ವಿಮಾನಗಳ ತನ್ನ ದಿಕ್ಕು ಬದಲಿಸಿದೆ.

ಭಾರೀ ಮಳೆಯಿಂದಾಗಿ 11 ವಿಮಾನಗಳ ಹಾರಾಟ ರದ್ದಾಗಿದ್ದು, ಸುಮಾರು 17 ವಿಮಾನಗಳು ಮುಂಬೈ ವಿಮಾನ ನಿಲ್ದಾಣದತ್ತ ಕಳುಹಿಸಲಾಗಿದೆ ಎಂದು ವರದಿ ವಿವರಿಸಿದೆ. ಥಾಣೆ, ಕಲ್ಯಾಣ್ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಕ್ಷಣಾ ಕಾರ್ಯಕ್ಕೆ ಎನ್ ಡಿಆರ್ ಎಫ್ ಪಡೆ ಆಗಮಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಯ್‌ಗಢ ಜಿಲ್ಲೆ, ಠಾಣೆ, ಪಾಲ್ಘರ್‌ ಮತ್ತು ಮುಂಬಯಿನಲ್ಲಿ ಮುಂದಿನ 3 ದಿನಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಯಿದೆ ಎಂದು ಎಚ್ಚರಿಸಿರುವ ಭಾರತೀಯ ಹವಾಮಾನ ಇಲಾಖೆ ಈ ಪ್ರದೇಶಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಗಂಟೆಗೆ 60 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಜತೆಗೆ ಗುಡುಗು ಸಿಡಿಲುಗಳ ಆರ್ಭಟ ಹೆಚ್ಚಲಿದೆ ಎಂದು ಜನಸಾಮಾನ್ಯರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಮುಂಬಯಿ ಹೊರತಾಗಿ ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ವಿದರ್ಭಾ, ಗುಜರಾತ್‌ ಹಾಗೂ ರಾಜಸ್ಥಾನಗಳಲ್ಲಿಯೂ ಮುಂದಿನ ಮೂರು ದಿನ ಮಳೆ ಹೆಚ್ಚಾಗಲಿದೆ ಎಂದು ಇಲಾಖೆ ಹೇಳಿದೆ..

ಶುಕ್ರವಾರ ರಾತ್ರಿಯಿಂದಲೇ ಮುಂಬೈಯಲ್ಲಿ ಧಾರಾಕಾರ ಮಳೆ ಸುರಿಯತೊಡಗಿದೆ. ಥಾಣೆ ಮತ್ತು ಪಾಲ್ ಘರ್ ನಲ್ಲಿ ಭಾರೀ ಮಳೆಯಾಗಿರುವುದಾಗಿ ವರದಿ ಹೇಳಿದೆ. ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎನ್ ಡಿಆರ್ ಎಫ್ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

 

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago