Featured

ಮತ್ತೆ ಶಿರಾಢಿಘಾಟ್‌ನಲ್ಲಿ ಭೂಕುಸಿತ : ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ – Vishwanews24

ಮತ್ತೆ ಶಿರಾಢಿಘಾಟ್‌ನಲ್ಲಿ ಭೂಕುಸಿತ : ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ

ಹಾಸನ : ರಾಜಧಾನಿ ಬೆಂಗಳೂರು ಹಾಗೂ ಬಂದರು ನಗರಿ ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ಶಿರಾಢಿಘಾಟ್‌ನಲ್ಲಿ ಇಂದು ಮತ್ತೆ ಭೂಕುಸಿತ ಉಂಟಾಗಿದೆ.

ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪ ವಾರದ ಹಿಂದೆ ಅಲ್ಪ ಪ್ರಮಾಣದಲ್ಲಿ ರಸ್ತೆ ಕುಸಿದಿತ್ತು, ಅದರೆ ಇಂದು ಮಧ್ಯಾಹ್ನದ ವೇಳೆಗೆ ಮತ್ತೆ ಭೂಕುಸಿತ ಉಂಟಾಗಿದೆ, ಈ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ.

ವಾರದ ಹಿಂದೆ ರಸ್ತೆ ಕುಸಿದ ಸ್ಥಳಕ್ಕೆ ಲೋಕೋಪಯೋಗಿ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು, ಸಚಿವರು ಭೇಟಿ ನೀಡಿದ ನಾಲ್ಕನೇ ದಿನಕ್ಕೆ ಮತ್ತೆ ಭೂಕುಸಿತ ಸಂಭವಿಸಿದೆ. ಕಳೆದ ವರ್ಷ ಕೂಡ ಇದೇ ಸ್ಥಳದಲ್ಲಿ ರಸ್ತೆ ಕುಸಿದಿತ್ತು, ಲಘು ವಾಹನಗಳಿಗೆ ಏಕ ಮುಖ ಸಂಚಾರದಂತೆ ಚಲಿಸಲು ಅಧಿಕಾರಿಗಳು ಅವಕಾಶ ನೀಡಿದ್ದಾರೆ. ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮತ್ತೆ ಕುಸಿಯುತ್ತಿರುವ ರಸ್ತೆಯಿಂದ ಆತಂಕ ಹೆಚ್ಚಾಗಿದೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

14 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

14 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

14 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago