Featured

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು

ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು

ಮಂಗಳೂರು(ದಕ್ಷಿಣ ಕನ್ನಡ): ಕರಾವಳಿಯಲ್ಲಿ ಉತ್ತುಂಗದ ಕಾಲದಲ್ಲಿಯೇ ಮೀನುಗಾರರಿಗೆ ಸಂಕಷ್ಟ ಎದುರಾಗಿದೆ. ಸಾಮಾನ್ಯವಾಗಿ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸಮುದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬೋಟ್‌ಗಳು ತೆರಳುವ ಕಾಲವಾಗಿದ್ದರೂ, ಈ ಬಾರಿ ಪರಿಸ್ಥಿತಿ ಭಿನ್ನ. ಮೀನುಗಳು ಕಡಿಮೆಯಾಗಿರುವುದು, ಇಂಧನ ಮತ್ತು ಗ್ಯಾಸ್ ಸರಬರಾಜಿನ ಅಡಚಣೆ ಸೇರಿದಂತೆ ಹಲವು ಕಾರಣಗಳಿಂದಾಗಿ ಹಲವಾರು ಬೋಟ್‌ಗಳು ಸಮುದ್ರಕ್ಕೆ ತೆರಳದೇ ನಿಂತಿವೆ. ಇದೀಗ ಮಂಗಳೂರು ಧಕ್ಕೆಯಲ್ಲಿ ಶೇಕಡ 85ರಷ್ಟು ಬೋಟ್​ಗಳು ಮೀನುಗಾರಿಕೆ ನಿಲ್ಲಿಸಿವೆ.

ಇದನ್ನೂ ಓದಿ:

ಕೆಲ ದಿನಗಳ ಹಿಂದೆ ಮೀನುಗಾರಿಕೆಯ ಬಂಕ್​ಗಳಲ್ಲಿ ಉಂಟಾದ ಡೀಸೆಲ್ ಸರಬರಾಜಿನ ಸಮಸ್ಯೆ ಕೂಡ ಮೀನುಗಾರಿಕೆಗೆ ಹೊಡೆತ ನೀಡಿತ್ತು. ಆ ಸಮಸ್ಯೆ ಇದೀಗ ಬಹುತೇಕ ಸರಿಯಾಗಿದ್ದರೂ, ಅದರ ಪರಿಣಾಮವಾಗಿ ಕೆಲವು ಬೋಟ್‌ಗಳು ಸಮಯಕ್ಕೆ ಸರಿಯಾಗಿ ಸಮುದ್ರಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಮತ್ತೊಂದೆಡೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್‌ಗಳಿಗೆ ಅಗತ್ಯವಾಗುವ ಅಡುಗೆ ಗ್ಯಾಸ್ ಕೊರತೆ ಕೂಡ ಪ್ರಮುಖ ಅಡ್ಡಿಯಾಗಿ ಪರಿಣಮಿಸಿದೆ.

ಮಂಗಳೂರು ಟ್ರಾಲ್ ಬೋಟ್ ಅಸೋಸಿಯೇಷನ್ ಅಧ್ಯಕ್ಷ ಚೇತನ್ ಬೆಂಗ್ರೆ ಅವರು ಮಾತನಾಡಿ, “ಸಾಮಾನ್ಯವಾಗಿ ನೂರು ಪ್ರತಿಶತ ಬೋಟ್‌ಗಳು ಸಮುದ್ರಕ್ಕೆ ತೆರಳುತ್ತಿದ್ದವು. ಈಗ ಸುಮಾರು 15 ಪ್ರತಿಶತ ಬೋಟ್‌ಗಳು ಮಾತ್ರ ತೆರಳುತ್ತಿವೆ. ಸಮುದ್ರದ ನೀರಿನ ತಾಪಮಾನ ಮತ್ತು ಜಾಗತಿಕ ಹವಾಮಾನ ಬದಲಾವಣೆ ಪರಿಣಾಮವಾಗಿ ಮೀನುಗಳ ಲಭ್ಯತೆ ಕಡಿಮೆಯಾಗಿದೆ. ಕೆಲ ದಿನಗಳ ಇಂಧನ ಮತ್ತು ಗ್ಯಾಸ್ ಸಮಸ್ಯೆಯೂ ಇದಕ್ಕೆ ಕಾರಣವಾಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

1 day ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

1 day ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

1 day ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

1 day ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

1 day ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

1 day ago