ಮಂಗಳೂರು(ದಕ್ಷಿಣ ಕನ್ನಡ): ಕರಾವಳಿಯಲ್ಲಿ ಉತ್ತುಂಗದ ಕಾಲದಲ್ಲಿಯೇ ಮೀನುಗಾರರಿಗೆ ಸಂಕಷ್ಟ ಎದುರಾಗಿದೆ. ಸಾಮಾನ್ಯವಾಗಿ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಸಮುದ್ರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬೋಟ್‌ಗಳು ತೆರಳುವ ಕಾಲವಾಗಿದ್ದರೂ, ಈ ಬಾರಿ ಪರಿಸ್ಥಿತಿ ಭಿನ್ನ. ಮೀನುಗಳು ಕಡಿಮೆಯಾಗಿರುವುದು, ಇಂಧನ ಮತ್ತು ಗ್ಯಾಸ್ ಸರಬರಾಜಿನ ಅಡಚಣೆ ಸೇರಿದಂತೆ ಹಲವು ಕಾರಣಗಳಿಂದಾಗಿ ಹಲವಾರು ಬೋಟ್‌ಗಳು ಸಮುದ್ರಕ್ಕೆ ತೆರಳದೇ ನಿಂತಿವೆ. ಇದೀಗ ಮಂಗಳೂರು ಧಕ್ಕೆಯಲ್ಲಿ ಶೇಕಡ 85ರಷ್ಟು ಬೋಟ್‌ಗಳು ಮೀನುಗಾರಿಕೆ ನಿಲ್ಲಿಸಿವೆ.
ಇದನ್ನೂ ಓದಿ:
ಕೆಲ ದಿನಗಳ ಹಿಂದೆ ಮೀನುಗಾರಿಕೆಯ ಬಂಕ್ಗಳಲ್ಲಿ ಉಂಟಾದ ಡೀಸೆಲ್ ಸರಬರಾಜಿನ ಸಮಸ್ಯೆ ಕೂಡ ಮೀನುಗಾರಿಕೆಗೆ ಹೊಡೆತ ನೀಡಿತ್ತು. ಆ ಸಮಸ್ಯೆ ಇದೀಗ ಬಹುತೇಕ ಸರಿಯಾಗಿದ್ದರೂ, ಅದರ ಪರಿಣಾಮವಾಗಿ ಕೆಲವು ಬೋಟ್‌ಗಳು ಸಮಯಕ್ಕೆ ಸರಿಯಾಗಿ ಸಮುದ್ರಕ್ಕೆ ತೆರಳಲು ಸಾಧ್ಯವಾಗಿರಲಿಲ್ಲ. ಮತ್ತೊಂದೆಡೆ, ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಬೋಟ್‌ಗಳಿಗೆ ಅಗತ್ಯವಾಗುವ ಅಡುಗೆ ಗ್ಯಾಸ್ ಕೊರತೆ ಕೂಡ ಪ್ರಮುಖ ಅಡ್ಡಿಯಾಗಿ ಪರಿಣಮಿಸಿದೆ.
ಮಂಗಳೂರು ಟ್ರಾಲ್ ಬೋಟ್ ಅಸೋಸಿಯೇಷನ್ ಅಧ್ಯಕ್ಷ ಚೇತನ್ ಬೆಂಗ್ರೆ ಅವರು ಮಾತನಾಡಿ, “ಸಾಮಾನ್ಯವಾಗಿ ನೂರು ಪ್ರತಿಶತ ಬೋಟ್‌ಗಳು ಸಮುದ್ರಕ್ಕೆ ತೆರಳುತ್ತಿದ್ದವು. ಈಗ ಸುಮಾರು 15 ಪ್ರತಿಶತ ಬೋಟ್‌ಗಳು ಮಾತ್ರ ತೆರಳುತ್ತಿವೆ. ಸಮುದ್ರದ ನೀರಿನ ತಾಪಮಾನ ಮತ್ತು ಜಾಗತಿಕ ಹವಾಮಾನ ಬದಲಾವಣೆ ಪರಿಣಾಮವಾಗಿ ಮೀನುಗಳ ಲಭ್ಯತೆ ಕಡಿಮೆಯಾಗಿದೆ. ಕೆಲ ದಿನಗಳ ಇಂಧನ ಮತ್ತು ಗ್ಯಾಸ್ ಸಮಸ್ಯೆಯೂ ಇದಕ್ಕೆ ಕಾರಣವಾಗಿದೆ” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…